ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಜ್ಯೋತಿಷಿ ಎಸ್.ಕೆ. ಜೈನ್(67) #SKJain ಇಂದು ವಿಧಿವಶರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು 11 ದಿನಗಳ ಹಿಂದೆ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಇಹಲೋಕ ತ್ಯಜಿಸಿದ್ದಾರೆ. ಎಸ್.ಕೆ. ಜೈನ್ ಶ್ವಾಸಕೋಶ #Lungs ಸಮಸ್ಯೆಯಿಂದ ಬಳಲುತ್ತಿದ್ದರು.
ಎಸ್.ಕೆ. ಜೈನ್ ಅವರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
2 ದಶಕಗಳ ಹಿಂದೆ ಟಿವಿ ಮಾಧ್ಯಮದ ಮೂಲಕ ಜ್ಯೋತಿಷ್ಯ #Astrology ಕಾರ್ಯಕ್ರಮ ನಡೆಸಿದ್ದ ಜೈನ್ ಅವರು ಭಾರೀ ಸಂಚಲನ ಮೂಡಿಸಿದ್ದರು. ಕರ್ನಾಟಕ ಮಾಧ್ಯಮದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದ ಜೈನ್ ಅವರು, ರಾಶಿ ಭವಿಷ್ಯ, ಶುಭ-ಅಶುಭ, ಫಲಾಫಲ ಸೇರಿದಂತೆ ಜ್ಯೋತಿಷ್ಯದ ಪರಿಕರಗಳಲ್ಲಿ ನಿಖರತೆಯನ್ನು ತಂದುಕೊಟ್ಟಿದ್ದರು.
ವಿದ್ಯುನ್ಮಾನ ಮಾಧ್ಯಮದಲ್ಲಿ ಜ್ಯೋತಿಷಿ ಕಾರ್ಯಕ್ರಮ ನಡೆಸಿಕೊಡುವ ಮೂಲಕ ಕರ್ನಾಟಕದಲ್ಲಿ ಹೊಸ ಪರಂಪರೆ ಹಾಗೂ ಜ್ಯೋತಿಷಿಯನ್ನು ಮನೆ ಮನೆಗೆ ತಲುಪಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಅಂದಿನ ಕಾಲಮಾನದಲ್ಲೇ ಎಸ್.ಕೆ. ಜೈನ್ ಅವರ ಕಾರ್ಯಕ್ರಮಕ್ಕೆ ಲಕ್ಷಾಂತರ ವೀಕ್ಷಕರಿದ್ದರು. ಬಹಳಷ್ಟು ವೀಕ್ಷಕರು ಕಾದಿದ್ದು ಜೈನ್ ಅವರ ಕಾರ್ಯಕ್ರಮ ವೀಕ್ಷಿಸುತ್ತಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post