ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಪಿಎಫ್’ಐ ಕಚೇರಿ ಹಾಗೂ ಮುಖಂಡರ ನಿವಾಸಗಳ ಮೇಲೆ ರಾಷ್ಟ್ರೀಯ ತನಿಖಾ ದಳ ಹಾಗೂ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಏಕ ಕಾಲಕ್ಕೆ ದಾಳಿ ನಡೆಸಿದ್ದು, ಬಿಗ್ ಶಾಕ್ ನೀಡಿದೆ.
ದಿನದಿಂದ ದಿನಕ್ಕೆ ಪಿಎಫ್’ಐ ಸಂಘಟನೆ ವಿರುದ್ಧ ಆರೋಪಗಳ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಅನೇಕ ಸ್ಥಳಗಳಲ್ಲಿ ಎನ್’ಐಎ ಹುಡುಕಾಟ ನಡೆಸುತ್ತಿದೆ.
ಭಯೋತ್ಪಾದನೆಗೆ ಧನಸಹಾಯ, ತರಬೇತಿ ಶಿಬಿರಗಳನ್ನು ಆಯೋಜಿಸುವುದು ಮತ್ತು ನಿಷೇಧಿತ ಸಂಸ್ಥೆಗಳಿಗೆ ಸೇರಲು ಜನರನ್ನು ಮೂಲಭೂತವಾಗಿ ರೂಪಿಸುವ ವ್ಯಕ್ತಿಗಳ ವಸತಿ ಮತ್ತು ಅಧಿಕೃತ ಆವರಣದಲ್ಲಿ ಈ ಹುಡುಕಾಟಗಳನ್ನು ಅಧಿಕಾರಿಗಳು ನಡೆಸುತ್ತಿದ್ದಾರೆ.
ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಉತ್ತರ ಪ್ರದೇಶ ಸೇರಿದಂತೆ 10ಕ್ಕೂ ಅಧಿಕ ರಾಜ್ಯಗಳಲ್ಲಿ ಸ್ಥಳೀಯ ಪೊಲೀಸರ ನೆರವಿನೊಂದಿಗೆ ಪಿಎಫ್’ಐ ಸಂಘಟನೆಯ 100ಕ್ಕೂ ಹೆಚ್ಚಿ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಅಲ್ಲದೇ, ಪ್ರಮುಖವಾಗಿ ಬೆಂಗಳೂರಿನಲ್ಲಿ ಪಿಎಫ್’ಐ ಮುಖಂಡ ಅಕ್ಸರ್ ಪಾಷಾನನ್ನು ಆತನ ನಿವಾಸದಲ್ಲಿ ಅಧಿಕಾರಿಗಳು ಬಂಧಿಸಿದ್ದಾರೆ.
ಮಂಗಳೂರಿನಲ್ಲಿ ಪ್ರತಿಭಟನೆ
ಪಿಎಫ್’ಐ ಕಚೇರಿ ಹಾಗೂ ಕಾರ್ಯಕರ್ತರ ನಿವಾಸಗಳ ಮೇಲಿನ ದಾಳಿಯನ್ನು ಖಂಡಿಸಿ, ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.
ಪಿಎಫ್’ಐ, ಎಸ್’ಡಿಪಿಐ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಅವರಲ್ಲಿ 100ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನಲ್ಲಿ ಪಿಎಫ್’ಐ, ಎಸ್’ಡಿಪಿಐ ಸಂಘಟನೆಗಳ ಕಚೇರಿಗಳು, ಮುಖಂಡರ ನಿವಾಸಗಳ ಮೇಲೆ ದಾಳಿ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post