ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: 2012ರಲ್ಲಿ ದೇಶವನ್ನೇ ತಲ್ಲಣಿಸಿದ್ದ ನಿರ್ಭಯಾ ಹತ್ಯಾಚಾರ ಪ್ರಕರಣದ ಅಪರಾಧಿಗಳ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿರುವ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಕ್ಷಯ್ ಕುಮಾರ್ ತನಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ಮರುಪರಿಶೀಲನೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿ ಮಹತ್ವದ ತೀರ್ಪು ನೀಡಿದ್ದು, ದೇಶವಾಸಿಗಳಿಗೆ ನ್ಯಾಯಾಂಗ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಗಟ್ಟಿಗೊಳಿಸಿದೆ.
2012 ರ ಡಿಸೆಂಬರ್ 16 ರ ರಾತ್ರಿ ಚಲಿಸುವ ಬಸ್’ನಲ್ಲಿ 23 ವರ್ಷದ ಅರೆವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಗಲ್ಲು ಶಿಕ್ಷೆ ಎದುರಿಸುತ್ತಿದ್ದಾರೆ. ನಾಲ್ವರು ಆರೋಪಿಗಳಲ್ಲಿ ಒಬ್ಬನಾಗಿರುವ ಆರೋಪಿ ಅಕ್ಷಯ್ ಗಲ್ಲುಶಿಕ್ಷೆಯನ್ನು ಮರುಪರಿಶೀಲಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸಿದ್ದ.
Get in Touch With Us info@kalpa.news Whatsapp: 9481252093
Discussion about this post