ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪ್ರಯಾಣಿಕರ ಅನುಕೂಲಕ್ಕಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾಗಿರುವ ಟರ್ಮಿನಲ್ 2 ಅನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು.
ಬೆಂಗಳೂರು ಪ್ರವಾಸದಲ್ಲಿರುವ ಪ್ರಧಾನಿಯವರು ಇಂದು ಟರ್ಮಿನಲ್ 2ನ್ನು ಉದ್ಘಾಟಿಸಿ, ನಿಲ್ದಾಣದೊಗಳಗೆ ತೆರಳಿ ವೀಕ್ಷಿಸಿದರು. ಅಲ್ಲದೇ, ಇಡಿಯ ಟರ್ಮಿನಲ್ ವ್ಯವಸ್ಥೆಯ ಕುರಿತಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದರು.


13 ಸಾವಿರ ಕೋಟಿ ರೂ. ವೆಚ್ಚದಲ್ಲಿ ಈ ಟರ್ಮಿನಲ್ ನಿರ್ಮಿಸಲಾಗಿದ್ದು, ಅತ್ಯಾಧುನಿಕ ವ್ಯವಸ್ಥೆಗಳನ್ನು ಇದು ಹೊಂದಿದೆ.
ಉದ್ಘಾಟನೆಯ ಸಂದರ್ಭದಲ್ಲಿ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















