ಕಲ್ಪ ಮೀಡಿಯಾ ಹೌಸ್ | ಅಹಮದಾಬಾದ್ |
ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಶತಾಯುಷಿ ಹೀರಾಬೆನ್ ಮೋದಿ(100) ಅವರು ಇಂದು ಮುಂಜಾನೆ ವಿಧಿವಶರಾಗಿದ್ದಾರೆ.

ಹೀರಾಬೆನ್ ಮೋದಿ ಅವರು 2022ರ ಜೂನ್ 18ರಂದು 100ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು. ಪ್ರಧಾನಿ ಮೋದಿ ಅವರು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿ ತಾಯಿಗೆ ಶುಭಾಶಯ ತಿಳಿಸಿ, ತಾಯಿಯ ಪಾದ ತೊಳೆದು ಪೂಜಿಸಿ ಆಶೀರ್ವಾದ ಪಡೆದಿದ್ದರು.

ಇನ್ನು, ಹೀರಾಬೆನ್ ನಿಧನಕ್ಕೆ ಗಣ್ಯರೆಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಪೂಜ್ಯ ತಾಯಿ ಹೀರಾಬೆನ್ ಅವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು. ದೇಶಕ್ಕೆ ಹೆಮ್ಮೆ ತಂದ ಪುತ್ರನಿಗೆ ಜನ್ಮ ನೀಡಿದ ಮಹಾತಾಯಿಗೆ ಸದ್ಗತಿ ಕೋರುತ್ತೇನೆ. ಪ್ರಧಾನಿಯವರಿಗೆ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದು, ಕುಟುಂಬ ಪೋಷಣೆಗಾಗಿ ಹೀರಾಬೆನ್ ಅವರು ನಡೆಸಿದ ಹೋರಾಟ ಎಲ್ಲರಿಗೂ ಮಾದರಿಯಾಗಿದೆ. ಅವರ ತ್ಯಾಗದ ತಪಸ್ವಿ ಜೀವನ ಸದಾ ನಮ್ಮ ನೆನಪಿನಲ್ಲಿ ಉಳಿಯುತ್ತದೆ. ಈ ದುಃಖದ ಸಮಯದಲ್ಲಿ ಇಡೀ ರಾಷ್ಟ್ರವು ಪ್ರಧಾನಿ ಮೋದಿ ಮತ್ತು ಅವರ ಕುಟುಂಬದೊಂದಿಗೆ ನಿಂತಿದೆ. ಕೋಟಿ ಕೋಟಿ ಜನರ ಪ್ರಾರ್ಥನೆ ನಿಮ್ಮೊಂದಿಗಿದೆ. ಓಂ ಶಾಂತಿ ಎಂದಿದ್ದಾರೆ.

ಇನ್ನು, ಈ ಕುರಿತಂತೆ ಟ್ವೀಟ್ ಮಾಡಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಪ್ರಧಾನಿಯವರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ನರೇಂದ್ರ ಮೋದಿ
ಅವರ ತಾಯಿ ಹೀರಾಬೆನ್ ಮೋದಿಯವರ ನಿಧನದ ಬಗ್ಗೆ. ಅವರು ಪೂರ್ಣ ಜೀವನವನ್ನು ನಡೆಸಿದ ಶತಾಯುಷಿಯಾಗಿದ್ದರು, ಆದರೆ ಒಬ್ಬ ತಾಯಿ ತನ್ನ ಸುತ್ತಲೂ, ಶಾಶ್ವತವಾಗಿ, ಶಕ್ತಿ ತುಂಬಲು ಮತ್ತು ಲಂಗರು ಹಾಕಲು ಬಯಸುತ್ತಾರೆ. ದೇವರು ಶ್ರೀಗಳಿಗೆ ಕೊಡಲಿ. ನಷ್ಟವನ್ನು ಭರಿಸುವ ಶಕ್ತಿ ಮೋದಿಯವರಿಗಿದೆ. ಓಂ ಶಾಂತಿ ಎಂದಿದ್ದಾರೆ.
ರಕ್ಷಣಾ ಸಚಿವ ರಾಜನಾಥ ಸಿಂಗ್ ಟ್ವೀಟ್ ಮಾಡಿದ್ದು, ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್ ಅವರ ನಿಧನದಿಂದ ತೀವ್ರ ನೋವಾಗಿದೆ. ತಾಯಿಯ ಸಾವು ಒಬ್ಬರ ಜೀವನದಲ್ಲಿ ತುಂಬಲು ಅಸಾಧ್ಯವಾದ ಶೂನ್ಯ ಭಾವನೆಯನ್ನು ಉಂಟುಮಾಡುತ್ತದೆ. ಈ ದುಃಖದ ಸಮಯದಲ್ಲಿ ನಾನು ಪ್ರಧಾನಿ ಮತ್ತು ಅವರ ಇಡೀ ಕುಟುಂಬಕ್ಕೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post