ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯದಾದ್ಯಂತ ಹಿಜಾಬ್-ಕೇಸರಿ ವಿವಾದ ತಾರಕಕ್ಕೆ ಏರಿರುವಂತೆಯೇ ನಗರದ ಬಾಪೂಜಿ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.
ಇಂದು ಮುಂಜಾನೆ ಬಾಪೂಜಿ ನಗರ ಸರ್ಕಾರಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಿಡಿಗೇಡಿಗಳು ಏಕಾಏಕಿ ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮವಾಗಿ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಯೊಬ್ಬ ಗಾಯಗೊಂಡಿದ್ದಾನೆ.
ವಿದ್ಯಾರ್ಥಿಗಳು ಕೇಸರಿ ಧ್ವಜವನ್ನು ಧ್ವಜಸ್ತಂಭಕ್ಕೆ ಕಟ್ಟಲು ಮುಂದಾಗಿದ್ದಾರೆ. ಇದಕ್ಕೂ ಮುನ್ನವೇ ಕಾಲೇಜು ಕಟ್ಟಡ ಏರಿದ್ದ ಕೆಲವು ವಿದ್ಯಾರ್ಥಿಗಳು ಕಿಡಿಗೇಡಿಗಳ ಕುಮ್ಮಕ್ಕಿನಿಂದ ಮೇಲಿನಿಂದ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಸದ್ಯ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ನಿಯಂತ್ರಣಕ್ಕೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ, ಡಿವೈಎಸ್’ಪಿ ಅವರುಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ಸ್ಥಳಕ್ಕೆ ಕರೆಸಿಕೊಳ್ಳಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post