ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಮೈಸೂರು |
ರೇಣುಕಾಸ್ವಾಮಿ ಎಂಬ ವ್ಯಕ್ತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ಬಳಿಯಿರುವ ಫಾರಂ ಹೌಸ್’ನಿಂದ ದರ್ಶನ್ ಅವರನ್ನು ಇಂದು ಮುಂಜಾನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿ, ಠಾಣೆಗೆ ತಂದು ಕೂರಿಸಿದ್ದಾರೆ.
ದರ್ಶನ್ ಆಪ್ತರಾಗಿರುವ ಪವಿತ್ರಾ ಗೌಡ ಎನ್ನುವವರ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎನ್ನುವವರು ಅಸಭ್ಯವಾಗಿ ಪೋಸ್ಟ್ ಮಾಡಿದ್ದರು ಎನ್ನಲಾಗಿದೆ. ಈ ಕುರಿತಂತೆ ದರ್ಶನ್ ಹಿಂಬಾಲಕರು ಎನ್ನುವ ಒಂದು ಗುಂಪು ರೇಣುಕಾಸ್ವಾಮಿ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರು. ಇದರಿಂದಾಗಿ ರೇಣುಕಾಸ್ವಾಮಿ ಅವರು ಸಾವನ್ನಪ್ಪಿದ್ದು, ಬೆಂಗಳೂರಿನ ಕಾಮಾಕ್ಷಿಪಾಳ್ಯ ವ್ಯಾಪ್ತಿಯ ನಾಲೆ ಬಳಿಯಲ್ಲಿ ಶವ ಎಸೆದು ಪರಾರಿಯಾಗಿದ್ದರು.
Also read: ಗ್ಯಾರಂಟಿ ಯೋಜನೆಗಳ ಬಗ್ಗೆ ಸಚಿವ ಮಧು ಬಂಗಾರಪ್ಪ ಮಹತ್ವದ ಹೇಳಿಕೆ
ಘಟನೆಗೆ ಸಂಬಂಧಿಸಿದಂತೆ ಇದರಲ್ಲಿ ದರ್ಶನ್ ಪಾತ್ರ ಇದೆಯೋ, ಇಲ್ಲವೋ ಎಂಬುದು ತನಿಖೆಯಿಂದಷ್ಟೇ ತಿಳಿದುಬರಬೇಕಿದೆ. ಆದರೆ, ಪ್ರಾಥಮಿಕ ಹಂತದಲ್ಲಿ ದರ್ಶನ್ ಪಾತ್ರ ಇರುವ ಅನುಮಾನವಿರುವ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ವಶಕ್ಕೆ ಪಡೆದಿದ್ದು, ಕೆಲವೇ ಗಂಟೆಗಳಲ್ಲಿ ಅವರನ್ನು ಅರೆಸ್ಟ್ ತೋರಿಸುತ್ತಾರೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post