ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಹುಭಾಷಾ ಹಿರಿಯ ನಟಿ ಬಿ. ಸರೋಜಾ ದೇವಿ(87) ಇಂದು ವಿಧಿವಶರಾಗಿದ್ದಾರೆ.
ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ಸರೋಜಾದೇವಿ ಯಶವಂತಪುರದಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ ಇವರು 5 ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಚಿತ್ರರಂಗದ ಸಾಧನೆಗೆ ಇವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ನೀಡಿ ಪುರಸ್ಕರಿಸಿತ್ತು.
ಬಿ. ಸರೋಜಾದೇವಿ ಅವರು ಕನ್ನಡ ಚಿತ್ರರಂಗದ ಪ್ರಮುಖ ನಟಿ. ಅವರನ್ನು ಅಭಿನಯ ಸರಸ್ವತಿ ಎಂದು ಕರೆಯಲಾಗುತ್ತಿತ್ತು.
ಸರೋಜಾದೇವಿ ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಹೆಸರುವಾಸಿಯಾಗಿದ್ದರು. ಅವರು 1955 ರಿಂದ 1984 ರವರೆಗೆ ಸತತವಾಗಿ 161 ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದರು.
1969ರಲ್ಲಿ ಪದ್ಮಶ್ರೀ ಪ್ರಶಸ್ತಿ ಮತ್ತು 1992ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದ ಸರೋಜಾದೇವಿ ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಮತ್ತು ತಮಿಳುನಾಡಿನಿಂದ ಕಲೈಮಾಮಣಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post