ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡದ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್(83) ಇಂದು ಮುಂಜಾನೆ ವಿಧಿವಶರಾಗಿದ್ದರೆ.
ಚಂಪಾ ಎಂದೇ ಖ್ಯಾತರಾಗಿದ್ದ ಅವರು, ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರೆ.
ಎಲಚೇನಹಳ್ಳಿ ಮೆಟ್ರೋ ಸ್ಟೇಷನ್ ಪಕ್ಕದಲ್ಲೇ ಇರುವ ಜ್ಯೋತಿ ಶಾಲೆಯ ಬಳಿಯ ಅವರ ನಿವಾಸಕ್ಕೆ. ಕೆಲಹೊತ್ತಿನಲ್ಲೇ ಅಲ್ಲಿಗೆ ಪಾರ್ಥಿವ ಶರೀರವನ್ನು ತರಲಾಗುತ್ತದೆ.
ಧಾರವಾಡದವರಾದ ಚಂಪಾ ಅವರು ಕೆಲವು ವರ್ಷಗಳಿಂದ ಬೆಂಗಳೂರು ನಿವಾಸಿಯಾಗಿದ್ದರು. ಮೂಲತಃ ಇಂಗ್ಲಿಷ್ ಪ್ರಾಧ್ಯಾಪಕರು. ಕನ್ನಡ ವಿಮರ್ಶಾ ಕ್ಷೇತ್ರ, ನಾಟಕ ರಚನೆಯಲ್ಲಿ ಪ್ರಸಿದ್ಧರು. ಅವರು ರಚಿಸಿದ ನಾಟಕಗಳು ನಾಡಿನಲ್ಲಿ – ಹೊರನಾಡು – ವಿದೇಶಗಳಲ್ಲಿಯೂ ಪ್ರದರ್ಶಿತವಾಗಿವೆ. ಅವರ ವಿಮರ್ಶೆಯೆಂದರೆ ಬಹು ಹರಿತ ಎಂದೇ ಖ್ಯಾತವಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post