ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಚೋರಡಿ ಬಳಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಠವಷಾತ್ ಯಾವುದೇ ರೀತಿಯ ಸಾವುನೋವುಗಳು ಸಂಭವಿಸಿಲ್ಲ.
ಸಾಗರ ಕಡೆಯಿಂದ ಬಂದ ಖಾಸಗಿ ಬಸ್ ಚೋರಡಿ ಬಳಿಯಲ್ಲಿ ಪ್ರಯಾಣಿಕರನ್ನು ಇಳಿಸುವ ವೇಳೆ ಹಿಂಬದಿಯಿAದ ಬಂದ ಗೂಡ್ಸ್ ವಾಹನವೊಂದು ಓವರ್ ಟೇಕ್ ಮಾಡಲು ಯತ್ನಸಿದೆ. ಈ ವೇಳೆ ಹಿಂದಿನಿAದ ಬಂದ ಜಂಬಿಟ್ಟಿಗೆ ತುಂಬಿದ್ದ ಲಾರಿ ಗೂಡ್ಸ್ ವಾಹನಕ್ಕೆ ಹಾಗೂ ನಿಂತಿದ್ದ ಬಸ್’ಗೆ ಡಿಕ್ಕಿ ಹೊಡೆದಿದೆ.
ಪರಿಣಾಮವಾಗಿ ಎದುರಿನಿಂದ ಬರುತ್ತಿದ್ದ ಕಾರಿಗೂ ಸಹ ಇದು ಡಿಕ್ಕಿ ಹೊಡೆದು ಸರಣಿ ಅಪಾಘತ ಸಂಭವಿಸಿದೆ.
ಅದೃಷ್ಠವಷಾತ್ ಅಪಘಾತದಲ್ಲಿ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ. ಅಪಘಾತದ ಪರಿಣಾಮ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಈ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post