ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಶಿವಮೊಗ್ಗ |
ಮಳೆ ಕೊರತೆ ಹಿನ್ನೆಲೆಯಲ್ಲಿ 7 ತಾಲೂಕುಗಳನ್ನು ಸೇರಿ ಇಡಿಯ ಶಿವಮೊಗ್ಗವನ್ನು #Shivamogga ಬರಪೀಡಿತ #Drought ಜಿಲ್ಲೆಯನ್ನಾಗಿ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಿದ್ದು, 2023ನೆಯ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲೂಕುಗಳ ಪೈಕಿ, 195 ತಾಲೂಕುಗಳನ್ನು ಬರಪೀಡಿತ ಎಂದಿದೆ.
ಶಿವಮೊಗ್ಗದ 7 ತಾಲೂಕುಗಳು ತೀವ್ರ ಬರದ ಪಟ್ಟಿಯಲ್ಲಿದ್ದು ಮುಂದಿನ 6 ತಿಂಗಳ ಪ್ರಕಾರ ಬರ ಪೀಡಿತ ಜಿಲ್ಲೆ ಎಂದು ಘೋಷಿಸಲಾಗಿದೆ.
ಇನ್ನು, ಈ ಎಲ್ಲಾ ತಾಲೂಕುಗಳಲ್ಲಿ ಬೆಳೆ ಹಾನಿ ಸಮೀಕ್ಷೆ ಕೈಗೊಂಡ ನಂತರ 161 ತಾಲೂಕುಗಳನ್ನು ತೀವ್ರ ಬರಪೀಡಿತ ಹಾಗೂ 34 ತಾಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕು ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆರು ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೂ ಬರಪೀಡಿತ ಎಂದು ಘೋಷಿಸಲಾಗಿದೆ.
ಸಂಬಂಧ ಪಟ್ಟ ಜಿಲ್ಲಾಧಿಕಾರಿಗಳು #DC ಬರ ನಿರ್ವಹಣೆ ಕಾರ್ಯಕ್ರಮ ಕೈಗೊಳ್ಳಲು ಸರ್ಕಾರದಿಂದ ಕಾಲಕಾಲಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣೆ #NationalDisasterManagement ಹಾಗೂ ರಾಜ್ಯ ವಿಪತ್ತು ನಿರ್ವಹಣೆ ನಿಯಮಗಳ ಅನ್ವಯ ಮಾರ್ಗಸೂಚಿಗಳನ್ನು ನೀಡಲಾಗುವುದು ಎಂದು ಸರ್ಕಾರ ಹೊರಡಿಸಿರುವ ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.
ರಾಜ್ಯದ ಯಾವೆಲ್ಲಾ ತಾಲೂಕುಗಳಲ್ಲಿ ಬರ?
- ಬೆಂಗಳೂರು ನಗರ ಜಿಲ್ಲೆ: ಬೆಂಗಳೂರು ಪೂರ್ವ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ
- ರಾಮನಗರ ಜಿಲ್ಲೆ: ಕನಕಪುರ, ರಾಮನಗರ, ಹಾರೋಹಳ್ಳಿ
- ಚಿತ್ರದುರ್ಗ ಜಿಲ್ಲೆ: ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಳಲಕೆರೆ, ಹೊಸದುರ್ಗ, ಮೊಳಕಾಲ್ಮೂರು
- ದಾವಣಗೆರೆ ಜಿಲ್ಲೆ: ಚನ್ನಗಿರಿ, ದಾವಣಗೆರೆ, ಹರಿಹರ, ಹೊನ್ನಾಳಿ, ಜಗಳೂರು, ನ್ಯಾಮತಿ
- ಮೈಸೂರು ಜಿಲ್ಲೆ: ಎಚ್’ಡಿ ಕೋಟೆ, ಹುಣಸೂರು, ಮೈಸೂರು, ನಂಜನಗೂಡು, ಪಿರಿಯಾ ಪಟ್ಟಣ, ಟಿ. ನರಸೀಪುರ, ಸರಗೂರು, ಸಾಲಿಗ್ರಾಮ
- ಮಂಡ್ಯ ಜಿಲ್ಲೆ: ಕೆಆರ್ ಪೇಟೆ, ಮದ್ದೂರು, ಮಳವಳ್ಳಿ, ಮಂಡ್ಯ, ನಾಗಮಂಗಲ, ಪಾಂಡಪುರ, ಶ್ರೀರಂಗಪಟ್ಟಣ
- ಬಳ್ಳಾರಿ ಜಿಲ್ಲೆ: ಬಳ್ಳಾರಿ, ಸಂಡೂರು, ಶಿರುಗುಪ್ಪ, ಕುರುಗೋಡು, ಕಂಪ್ಲಿ
- ಕೊಪ್ಪಳ ಜಿಲ್ಲೆ: ಗಂಗಾವತಿ, ಕೊಪ್ಪಳ, ಕುಷ್ಟಗಿ, ಯಲಬುರ್ಗಾ, ಕರಟಗಿ, ಕುಕನೂರು, ಕನಕಗಿರಿ
- ರಾಯಚೂರು ಜಿಲ್ಲೆ: ಲಿಂಗಸುಗೂರು, ಮಾನ್ವಿ, ರಾಯಚೂರು ಶಿರವಾರ
- ಶಿವಮೊಗ್ಗ ಜಿಲ್ಲೆ: ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ, ಹೊಸನಗರ, ಸಾಗರ, ಸೊರಬ, ಶಿಕಾರಿಪುರ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post