ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಹತ್ವದ ಬೆಳವಣಿಗೆಯೊಂದರಲ್ಲಿ ಸೆ.13ರಂದು ನಿಗದಿಯಾಗಿದ್ದ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಗೆ ರಾಜ್ಯ ಹೈಕೋರ್ಟ್ ತಡೆ ನೀಡಿರುವ ಹಿನ್ನೆಲೆಯಲ್ಲಿ ವೇಳಾಪಟ್ಟಿಯನ್ನು ಹಿಂಪಡೆಯಲಾಗಿದೆ.
ಈ ಕುರಿತಂತೆ ಹೆಚ್ಚುವರಿ ಪ್ರಾದೇಶಿಕ ಆಯುಕ್ತರು ಸೂಚನೆ ಹೊರಡಿಸಿದ್ದು, ಸೆ.13ರಂದು ನಿಗದಿಯಾಗಿದ್ದ ಚುನಾವಣಾ ವೇಳಾಪಟ್ಟಿಯನ್ನು ಹಿಂಪಡೆಯಲಾಗಿದೆ ಎಂದು ತಿಳಿಸಲಾಗಿದೆ.
ರಾಜ್ಯ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರುವ ರಿಟ್ ಅರ್ಜಿಯ ವಿಚಾರಣೆ ನಡೆಸಿ ಮಧ್ಯಂತರ ಆದೇಶ ಹೊರಡಿಸಿರುವ ನ್ಯಾಯಾಲಯ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಿದೆ. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರು ಇಂದು ಸೂಚನೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿಯನ್ನು ಹಿಂಪಡೆಯಾಗಿದೆ ಎಂದು ಉಲ್ಲೇಖಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post