ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಿನ್ನ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷನ ಅಂತಿಮ ಯಾತ್ರೆ ವೇಳೆ ನಡೆದ ಕಲ್ಲು ತೂರಾಟ, ವಿಕೋಪಕ್ಕೆ ತಿರುಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಗಾಳಿಯನ್ನು ಗುಂಡು ಹಾರಿಸಿದ್ದಾರೆ.
Also Read: ಸಿದ್ಧಯ್ಯ ರಸ್ತೆಯಲ್ಲಿ ಮೆರವಣಿಗೆ ವೇಳೆ ಮತ್ತೆ ಕಲ್ಲು ತೂರಾಟ: ಪರಿಸ್ಥಿತಿ ನಿಯಂತ್ರಣಕ್ಕೆ ಟಿಯರ್ ಗ್ಯಾಸ್ ಬಳಕೆ
ಹರ್ಷನ ಪಾರ್ಥಿವ ಶರೀರದ ಮೆರವಣಿಗೆ ಸಿದ್ದಯ್ಯ ರಸ್ತೆ ತಲುಪಿದ ವೇಳೆ ಏಕಾಏಕಿ ಕಲ್ಲು ತೂರಾಟ ನಡೆಸಲಾಯಿತು. ಈ ವೇಳೆ ಎರಡೂ ಗುಂಪುಗಳ ನಡುವೆ ಭಾರೀ ಸಂಘರ್ಷ ಏರ್ಪಟ್ಟು, ಕಲ್ಲು ತೂರಾಟ ನಡೆಯಿತು.

ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಮೊದಲು ಲಾಠಿ ಪ್ರಹಾರ ನಡೆಸಿ, ಅಶ್ರುವಾಯ ಪ್ರಯೋಗಿಸಿದರು. ಆದರೆ, ಇದರಿಂದಲೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಹೀಗೆ ಹಾರಿದ ಗುಂಡು ಓರ್ವನ ತೊಡಯನ್ನು ಹೊಕ್ಕಿದ್ದು, ಆತ ಕುಸಿದು ಬಿದ್ದಿದ್ದಾನೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post