ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೇಶದಲ್ಲೇ ಸಂಚಲನ ಮೂಡಿಸಿದ್ದ ಬಲ್ಕಿಷ್ ಬಾನು #BalkisBano ಅತ್ಯಾಚಾರ ಪ್ರಕರಣದ 11 ಆರೋಪಿಗಳಿಗೆ ನೀಡಿಲಾಗಿದ್ದ ಕ್ಷಮಾದಾನ ಅರ್ಜಿಯನ್ನು ರದ್ದು ಮಾಡಲಾಗಿದೆ.
ಪ್ರಕರಣದ 11 ಆರೋಪಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಲಾಗಿತ್ತು. ಆದರೆ, ಇದನ್ನು ಸುಪ್ರೀಂ ಕೋರ್ಟಿನಲ್ಲಿ #SupremeCourt ಪ್ರಶ್ನಿಸಲಾಗಿತ್ತು. ಇಂದು ತೀರ್ಪು ಪ್ರಕಟಿಸಿರುವ ನ್ಯಾಯಾಲಯ 11 ಆರೋಪಿಗಳ ಕ್ಷಮಾದಾನವನ್ನು ರದ್ದು ಮಾಡಿದೆ.
2002 ರ ಗುಜರಾತ್ ಗಲಭೆಯ ಸಂದರ್ಭದಲ್ಲಿ 11 ಅಪರಾಧಿಗಳ ವಿರುದ್ಧ ದಾಖಲಿಸಲಾದ ಪ್ರಕರಣದಲ್ಲಿ, ಗೋದ್ರಾ ರೈಲು ದಹನ ಘಟನೆಯ ನಂತರ ಭುಗಿಲೆದ್ದಿತು.
ಈ ವೇಳೆ ನಡೆಸಲಾಗಿದ್ದ ಬಿಲ್ಕಿಷ್ ಬಾನೋ ಮೇಲೆ ಸಾಮೂಹಿಕ ಅತ್ಯಾಚಾರ #GangRape ಮತ್ತು ಆಕೆಯ ಕುಟುಂಬದ ಏಳು ಸದಸ್ಯರ ಹತ್ಯೆಯ ಆರೋಪದ ಮೇಲೆ ದೋಷಾರೋಪಣೆಗಳನ್ನು ಒಳಗೊಂಡಿತ್ತು.
ಸಾಮೂಹಿಕ ಅತ್ಯಾಚಾರದ ಬಲಿಪಶು ಬಿಲ್ಕಿಸ್ ಬಾನೋ 21 ವರ್ಷ ಮತ್ತು ಐದು ತಿಂಗಳ ಗರ್ಭಿಣಿಯಾಗಿದ್ದು, ಕೋಮು ಗಲಭೆಯಿಂದ ತಪ್ಪಿಸಿಕೊಳ್ಳುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಬಿಲ್ಕಿಷ್ ಬಾನೋ ಅವರ ಮಗಳು ಮತ್ತು ಇತರ 6 ಕುಟುಂಬದ ಸದಸ್ಯರ ಹತ್ಯೆಯಲ್ಲಿ ಭಾಗಿಯಾಗಿದ್ದ ಎಲ್ಲಾ 11 ಅಪರಾಧಿಗಳಿಗೆ ಗುಜರಾತ್ ಸರ್ಕಾರವು ಕ್ಷಮೆಯನ್ನು ನೀಡಿ, 2022ರ ಆಗಸ್ಟ್ 15ರಂದು ಬಿಡುಗಡೆ ಮಾಡಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post