ಸುದ್ಧಿ: ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ನ್ಯಾಯಾಲಯದಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದ, ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಯಲ್ಲಿ ಮುಖ್ಯ ನ್ಯಾಯಾಧೀಶರೂ ಸಹ ಬರುತ್ತಾರೆ ಎಂದು ಹೇಳಿದೆ.
ಈ ಕುರಿತಂತೆ ಮಹತ್ವದ ತೀರ್ಪು ನೀಡಿರುವ ಸಿಜೆಐ ರಂಜನ್ ಗೊಗೋಯ್, ಈ ಹಿಂದೆ ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಎತ್ತಿ ಹಿಡಿದಿದೆ.
ಸುಪ್ರೀಂಕೋರ್ಟ್ ನೀಡುವ ಎಲ್ಲಾ ತೀರ್ಪು ಪಾರದರ್ಶಕವಾಗಿದೆ ಎಂಬುದನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಿಜೆಐ ಕಚೇರಿ ಕೂಡಾ ಆರ್ ಟಿಐ ಅಡಿ ಬರಬೇಕು ಎಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು.
2010ರಲ್ಲಿಯೇ ಸುಪ್ರೀಂಕೋರ್ಟ್ ಸಾರ್ವಜನಿಕ ಉತ್ತರದಾಯಿತ್ವ ಹೊಂದಿದ್ದು, ಸಿಜೆಐ ಕಚೇರಿ ಕೂಡಾ ಆರ್ ಟಿಐ ಕಾಯ್ದೆಯಡಿ ಬರಬೇಕಾಗಿದೆ ಎಂದು ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ಎತ್ತಿ ಹಿಡಿದಿದೆ. ಆದರೆ ಕೆಲವು ಷರತ್ತುಗಳೊಂದಿಗೆ ಸಿಜೆಐ ಕಚೇರಿ ಆರ್ ಟಿಐ ವ್ಯಾಪ್ತಿಗೆ ಒಳಪಡುತ್ತದೆ ಎಂದು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ತೀರ್ಪು ನೀಡಿದೆ.
Get In Touch With Us info@kalpa.news Whatsapp: 9481252093
Discussion about this post