ಸಾಗರ: ತಾಲೂಕಿನ ಭೀಮನಕೋಣೆ ರಸ್ತೆಯ ಮುಂಗರವಳ್ಳಿ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ-ಮಗ ಇಬ್ಬರೂ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹೊಸನಗರ ರಸ್ತೆಯಿಂದ ಸಾಗರ ಕಡೆಗೆ ಬರುತ್ತಿದ್ದ ಟಿಂಬರ್ ಲಾರಿ, ಸಾಗರ ಸಂತೆ ಮುಗಿಸಿಕೊಂಡು ಕಳಸವಳ್ಳಿ ಕಡೆಗೆ ತೆರಳುತ್ತಿದ್ದ ಬೈಕ್’ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯಾದ ರಭಸಕ್ಕೆ ಬೈಕ್’ನಲ್ಲಿದ್ದ ತಂದೆ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್’ನ ಹಿಂಬದಿಯಲ್ಲಿ ಕುಳಿತಿದ್ದ ಸವಾರನ ಪತ್ನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
(ಮಾಹಿತಿ: ಇಮ್ರಾನ್ ಸಾಗರ್)

















