ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ಜಗಳೂರು ತಾಲೂಕಿನ ಕಾನನಕಟ್ಟೆಯ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.ವೇಗವಾಗಿ ಬಂದ ಇಂಡಿಕಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್’ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಓರ್ವ ಮೃತ ಪಟ್ಟಿದ್ದಾರೆ.ಮೃತರೆಲ್ಲರೂ ಯಾದಗಿರಿಯವರು ಎಂದು ಹೇಳಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post