ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಪೇಹಾಲ್ಗಮ್ ಉಗ್ರರ ದಾಳಿಯಲ್ಲಿ 26 ಭಾರತೀಯರನ್ನು ಕೊಂದ ಮೊದಲ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಿಓಕೆಯ ಹಲವು ಪ್ರದೇಶಗಳ ಮೇಲೆ ಭಾರತೀಯ ಸೇನೆ ರಾತ್ರೋ ರಾತ್ರಿ “ಅಪರೇಷನ್ ಸಿಂಧೂರ್” ಎಂಬ ಹೆಸರಿನ ಏರ್ ಸ್ಟ್ರೈಕ್ ನಡೆಸಿದ್ದು ಮೂವತ್ತು ಉಗ್ರರನ್ನು ಸದೆ ಬಡಿದಿದೆ.
ಆಪರೇಷನ್ ಸಿಂಧೂರ್ #OperationSindoor ಹೆಸರಿನಲ್ಲಿ ಭಾರತ ತಡರಾತ್ರಿ 1:44ಕ್ಕೆ ದಾಳಿ ನಡೆಸಿದೆ. ರಫೇಲ್ ಯುದ್ಧ ವಿಮಾನಗಳನ್ನು ಬಳಸಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಏರ್ ಸ್ಟ್ರೈಕ್ ನಡೆದಿದೆ.
ಉಗ್ರರ 9 ಸ್ಥಳಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಿದ್ದೇವೆ. ಯಾವುದೇ ಯಾವುದೇ ಪಾಕಿಸ್ತಾನಿ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿಲ್ಲ ಎಂದು ಭಾರತೀಯ ಸೇನೆ ತಿಳಿಸಿದೆ.
ಒಂಬತ್ತು ಗುರಿಗಳಲ್ಲಿ ನಾಲ್ಕು ಪಾಕಿಸ್ತಾನದಲ್ಲಿ ಮತ್ತು ಐದು ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದವು. ಪಾಕಿಸ್ತಾನದಲ್ಲಿರುವ ಗುರಿಗಳಲ್ಲಿ ಬಹಾವಲ್ಪುರ್, ಮುರಿಡ್ಕೆ ಮತ್ತು ಸಿಯಾಲ್‌ಕೋಟ್ ಸೇರಿವೆ. ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಲು ವಿಶೇಷ ನಿಖರ ಯುದ್ಧಸಾಮಗ್ರಿಗಳನ್ನು ಬಳಸಲಾಗಿದೆ.
ಭಾರತದ 26 ಸಹೋದರಿಯರ ಕುಂಕುಮ ಅಳಿಸಿದ್ದಕ್ಕೆ ನಡೆಸಿದ ಪ್ರತೀಕಾರಕ್ಕೆ ʼಆಪರೇಷನ್ ಸಿಂಧೂರʼ ಎಂಬ ಹೆಸರನ್ನು ಇಡಲಾಗಿದೆ. ಉಗ್ರರ ಶಿಬಿರಗಳನ್ನು ಧ್ವಂಸ ಮಾಡಲಾಗಿರುವ ವಿಡಿಯೋಗಳು ಹರಿದಾಡುತ್ತಿವೆ.
ಪಹಲ್ಗಾಮ್ ದಾಳಿಗೆ ಭಾರತ ಪ್ರತೀಕಾರ ತೀರಿಸುವುದಾಗಿ ಭಾರತ ಪ್ರತಿಜ್ಞೆ ಮಾಡಿತ್ತು. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತದ ಮಿಲಿಟರಿ ಪ್ರತಿಕ್ರಿಯೆಯ ವಿಧಾನ, ಗುರಿ ಮತ್ತು ಸಮಯವನ್ನು ನಿರ್ಧರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post