ನವದೆಹಲಿ: ಐಎನ್’ಎಕ್ಸ್ ಮೀಡಿಯಾ ಪ್ರಕರಣದಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಅವರನ್ನು ತಿಹಾರ್ ಜೈಲಿಗೆ ಸ್ಥಳಾಂತರಿಸಲಾಗುತ್ತಿದೆ.
ಚಿದಂಬರಂ ಅವರಿಗೆ ಇಂದು ದೆಹಲಿಯ ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಅವರು ನ್ಯಾಯಾಂಗ ಬಂಧನಕ್ಕೆ ವಹಿಸಿ ಸೆಪ್ಟೆಂಬರ್ 19ರವರೆಗೂ ತಿಹಾರ್ ಜೈಲಿನಲ್ಲಿರಿಸಲು ಸೂಚಿಸಿದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಚಿದಂಬರಂರನ್ನು ತಿಹಾರ್ ಜೈಲಿಗೆ ಸ್ಥಳಾಂತರಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಅವರನ್ನು ಆಗಸ್ಟ್ 21ರಂದು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.
Discussion about this post