ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯಸಭಾ ಚುನಾವಣೆ #RajyasabhaElection ಫಲಿತಾಂಶ ಪ್ರಕಟಗೊಂಡು ಕಾಂಗ್ರೆಸ್ #Congress ವಿಜೇತ ಅಭ್ಯರ್ಥಿ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದ ಅಂಗಳದಲ್ಲೇ `ಪಾಕಿಸ್ಥಾನ್ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ #Pakistan ಎಂಬ ಘೋಷಣೆ ಕೂಗುವ ಮೂಲಕ ಗೆಲುವಿನ ಸಂಭ್ರಮಾಚರಣೆ ಮಾಡುವ ಮೂಲಕ ದೇಶ ವಿರೋಧಿ ಘೋಷಣೆ ಕೂಗಿದ್ದಾರೆ.
ಘೋಷಣೆ ಕೂಗಿರುವ ದೃಶ್ಯಗಳು ಈಗಾಗಲೇ ಎಲ್ಲ ಮಾಧ್ಯಮಗಳಲ್ಲಿ ವೈರಲ್ ಆಗತೊಡಗಿವೆ.
ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ನಾಸೀರ್ ಹುಸೇನ್ ಪರ 47 ಮತಗಳು ಚಲಾವಣೆಯಾಗಿದೆ. ನಾಸಿರ್ ಹುಸೇನ್ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿದ್ದಾಗ ಅವರ ಹಿಂದೆ ನಿಂತಿದ್ದ ಯುವಕ 2 ಬಾರಿ ಘೋಷಣೆ ಕೂಗಿದ್ದಾನೆ.
ಘಟನೆ ಕುರಿತಂತೆ ಮಾಧ್ಯಮ ಪ್ರತಿನಿಧಿಗಳು ನಾಸಿರ್ ಅವರನ್ನು ಪ್ರಶ್ನಿಸಿದ ಮಾಧ್ಯಮ ಪ್ರತಿನಿಧಿಗಳ ಮೇಲೆಯೇ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post