ಮುಂಬೈ: ಭಯೋತ್ಪಾದಕರ ದಾಳಿ ಹಿನ್ನೆಲೆಯಲ್ಲಿ ಶ್ರೀಲಂಕಾದಲ್ಲಿ ಬುರ್ಕಾ ಧರಿಸುವುದನ್ನು ನಿಷೇಧಿಸಿರುವ ಬೆನ್ನಲ್ಲೇ, ಭಾರತದಲ್ಲೂ ಸಹ ಬುರ್ಕಾ ಧರಿಸುವುದನ್ನು ನಿಷೇಧಿಸಬೇಕು ಎಂದು ಶಿವಸೇನೆ ಒತ್ತಾಯಿಸಿದೆ.
ಈ ಕುರಿತಂತೆ ತನ್ನ ಮುಖವಾಣಿ ಸಾಮ್ನಾದಲ್ಲಿ ಬರೆದಿರುವ ಶಿವಸೇನೆ, ಭಾರತದ ರಾಷ್ಟ್ರೀಯ ಭದ್ರತೆಯ ಹಿತದೃಷ್ಠಿಯಿಂದ ದೇಶದಾದ್ಯಂತ ಬುರ್ಕಾ ಧರಿಸುವುದನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದೆ.
ಉಗ್ರರ ದಾಳಿ ಹಿನ್ನೆಲೆಯಲ್ಲಿ ಮಹತ್ವದ ಕ್ರಮ ಕೈಗೊಂಡ ಶ್ರೀಲಂಕಾ ತನ್ನ ದೇಶದಲ್ಲಿ ಬುರ್ಕಾ ಧರಿಸುವುದನ್ನು ನಿಷೇಧಿಸಿದೆ. ಇದನ್ನು ಆಧರಿಸಿ, ಭಾರತದಲ್ಲೂ ಸಹ ಬುರ್ಕಾ ಧರಿಸುವುದನ್ನು ನಿಷೇಧಿಸುವಂತಹ ದಿಟ್ಟ ಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಕೈಗೊಳ್ಳುವರೇ ಎಂದಿರುವ ಶಿವಸೇನೆ, ಪಾಕಿಸ್ಥಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸುವಂತಹ ಮಹತ್ವದ ಕ್ರಮ ಇದೂ ಸಹ ಆಗಿದೆ ಎಂದಿದೆ.
Discussion about this post