ಕಲ್ಪ ಮೀಡಿಯಾ ಹೌಸ್ | ಹೈದರಾಬಾದ್ |
ಇಂದು ಬೆಳಗ್ಗೆ ಹೈದರಾಬಾದ್ #Hyderabad ಹೊರವಲಯದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಭಾರತ್ ರಾಷ್ಟ್ರ ಸಮಿತಿಯ ಶಾಸಕಿ ಜಿ. ಲಾಸ್ಯ ನಂದಿತಾ(37) #MLALasyaNandita ದುರ್ಮರಣಕ್ಕೀಡಾಗಿದ್ದಾರೆ.
ಇಂದು ಮುಂಜಾನೆ 6.30ರ ವೇಳೆಯಲ್ಲಿ ತೆಲಂಗಾಣದ #Telangana ಸಂಗಾರೆಡ್ಡಿ ಜಿಲ್ಲೆಯ ಪಟಂಚೇರು ಎಂಬಲ್ಲಿ ಅಪಘಾತ ಸಂಭವಿಸಿದ್ದು, ತಡೆಗೋಡೆಗೆ ಕಾರು ವೇಗವಾಗಿ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ.

ಘಟನೆಯಲ್ಲಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post