Read - < 1 minute
ಶ್ರೀನಗರ: ಜಮ್ಮು ಕಾಶ್ಮೀರದ ಪೊಲೀಸ್ ಪಡೆಗಳ ಮೇಲೆ ಉಗ್ರರು ಇಂದು ಸಂಜೆ ದಾಳಿ ನಡೆಸಿದ್ದು, ಸ್ಥಳದಲ್ಲಿ ಭಾರೀ ಗುಂಡಿನ ಚಕಮಕಿ ನಡೆದಿದೆ.
ಅನಂತನಾಗ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಭಾರೀ ಗುಂಡಿನ ಚಕಮಕಿ ನಡೆಯುತ್ತಿದ್ದು, ಸೇನಾ ಯೋಧರು ತೀವ್ರ ಪ್ರತಿರೋಧ ವ್ಯಕ್ತಪಡಿಸಿದ್ದಾರೆ.
ಅನಂತನಾಗ್ ಜಿಲ್ಲೆಯ ಚೆಗಲಿ ಜನರಲ್ ಬಸ್ ಸ್ಟಾಂಡ್ ಬಳಿಯಲ್ಲಿ ಘಟನೆ ನಡೆದಿದ್ದು, ಬಿ/116 ಸೇನಾ ಪಡೆಗಳನ್ನು ನಿಯೋಜನೆ ಮಾಡಲಾಗಿದೆ.
ಘಟನೆಯಲ್ಲಿ ಸಿಆರ್’ಪಿಎಫ್’ನ ಐವರು ಯೋಧರು ಗಾಯಗೊಂಡಿದ್ದಾರೆ.
Discussion about this post