ಕಲ್ಪ ಮೀಡಿಯಾ ಹೌಸ್ | ಉತ್ತರಪ್ರದೇಶ |
ಝಾನ್ಸಿಯಲ್ಲಿ ನಡೆದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಜೈಲು ಪಾಲಾಗಿರುವ ಅತೀಕ್ ಅಹ್ಮದ್ ಪುತ್ರ ಹಾಗೂ ಸಹಚರನನ್ನು ಉತ್ತರ ಪ್ರದೇಶ #UttarPradesh ಪೊಲೀಸ್ ಎಸ್’ಟಿಎಫ್ ಎನ್’ಕೌಂಟರ್ #Encounter ಮಾಡಿದ್ದಾರೆ.
ಈ ಕುರಿತಂತೆ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದು, ಅತೀಕ್ ಅಹ್ಮದ್ ಅವರ ಪುತ್ರ ಅಸದ್ ಮತ್ತು ಅವರ ಆಪ್ತ ಗುಲಾಮ್ ಅವರನ್ನು ಹತ್ಯೆ ಮಾಡಿದೆ.
ಪ್ರಯಾಗ್’ರಾಜ್’ನ #Prayagraj ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಇಬ್ಬರಿಗೂ ಬೇಕಾಗಿದ್ದು, ತಲಾ ಐದು ಲಕ್ಷ ರೂಪಾಯಿ ಬಹುಮಾನ ಹೊಂದಿದ್ದರು. ಇವರಿಂದ ಅತ್ಯಾಧುನಿಕ ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
2005ರ ಬಿಎಸ್’ಪಿ ಶಾಸಕ ರಾಜು ಪಾಲ್ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಮತ್ತು ಆತನ ಇಬ್ಬರು ಪೊಲೀಸ್ ಭದ್ರತಾ ಸಿಬ್ಬಂದಿಯನ್ನು ಈ ವರ್ಷದ ಫೆಬ್ರವರಿ 24ರಂದು ಪ್ರಯಾಗ್’ರಾಜ್’ನ ಧೂಮಂಗಂಜ್ ಪ್ರದೇಶದಲ್ಲಿನ ಅವರ ಮನೆಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
ಉಮೇಶ್ ಪಾಲ್ ಅವರ ಪತ್ನಿ ಜಯಪಾಲ್ ನೀಡಿದ ದೂರಿನ ಆಧಾರದ ಮೇಲೆ, ಅತಿಕ್ ಅಹ್ಮದ್, ಅವರ ಸಹೋದರ ಅಶ್ರಫ್, ಪತ್ನಿ ಶೈಸ್ತಾ ಪರ್ವೀನ್, ಇಬ್ಬರು ಪುತ್ರರು, ಸಹಾಯಕರಾದ ಗುಡ್ಡು ಮುಸ್ಲಿಂ ಮತ್ತು ಗುಲಾಮ್ ಮತ್ತು ಇತರ ಒಂಬತ್ತು ಮಂದಿ ವಿರುದ್ಧ ಧೂಮಂಗAಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆಕ್ಷನ್ 147 (ಗಲಭೆ), 148 (ಮಾರಕ ಆಯುಧಗಳಿಂದ ಶಸ್ತ್ರಸಜ್ಜಿತವಾದ ಗಲಭೆ), 149 (ಸಾಮಾನ್ಯ ವಸ್ತುವಿನ ವಿಚಾರಣೆಯಲ್ಲಿ ಮಾಡಿದ ಅಪರಾಧದ ಕಾನೂನುಬಾಹಿರ ಸಭೆ ಅಪರಾಧ), 302 (ಕೊಲೆ), 307 (ಕೊಲೆಗೆ ಯತ್ನ) ಮತ್ತು 506 (ಅಪರಾಧ) ಅಡಿಯಲ್ಲಿ ಎಫ್’ಐಆರ್ ದಾಖಲಿಸಲಾಗಿದೆ.
ಅತೀಕ್ ಅಹ್ಮದ್ ಕೂಡ 2005ರ ರಾಜುಪಾಲ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post