ಕಲ್ಪ ಮೀಡಿಯಾ ಹೌಸ್ | ಆನಂದಪುರಂ |
ಬ್ಯಾಂಕ್ ಸಾಲದ ನೋಟೀಸ್ ವಿಚಾರದಲ್ಲಿ ಉಂಟಾದ ವೈಷಮ್ಯದ ಹಿನ್ನೆಲೆಯಲ್ಲಿ ಅಣ್ಣನೇ ತನ್ನ ಸ್ವಂತ ತಮ್ಮನನ್ನೇ ಹತ್ಯೆ ಮಾಡಿರುವ ಘಟನೆ ಸಾಗರ ತಾಲೂಕಿನ ಆನಂದಪುರಂನ #Anandapuram ಮಾದರಸನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ರಾಘವೇಂದ್ರ(39) ಹಾಗೂ ಹತ್ಯೆ ಮಾಡಿದ ಆರೋಪಿಯನ್ನು ಮಹೇಶ್(49) ಎಂದು ಗುರುತಿಸಲಾಗಿದೆ. ಘಟನೆ ಕುರಿತಂತೆ ಮೃತ ರಾಘವೇಂದ್ರ ಅವರ ಪತ್ನಿ ಲಲಿತಾ ಎನ್ನುವವರು ಪೊಲೀಸರಿಗೆ ದೂರು ನೀಡಿದ್ದಾರೆ.
ಶಿವಮೊಗ್ಗ: ಟಿಪ್ಪುನಗರದಲ್ಲಿ ಸಹೋದರರ ಮೇಲೆ ಚಾಕುವಿನಿಂದ ಹಲ್ಲೆ – ಇಬ್ಬರು ಗಾಯ
ಪ್ರಕರಣದ ಹಿನ್ನೆಲೆ
ಬ್ಯಾಂಕ್ ಸಾಲದ #BankLoan ನೋಟಿಸ್ ವಿಚಾರವಾಗಿ ಉಂಟಾದ ವೈಷಮ್ಯ ಹಿನ್ನೆಲೆಯಲ್ಲಿ, ರಾಘವೇಂದ್ರ ಹಾಗೂ ಮಹೇಶ್ ನಡುವೆ ವೈಮನಸ್ಯ ಉಂಟಾಗಿತ್ತು. ಇದರ ಬೆನ್ನಲ್ಲೇ, ಮೇ 23, 2026 ರಂದು ರಾತ್ರಿ ಸುಮಾರು 10:30 ಗಂಟೆ ವೇಳೆಗೆ, ಆರೋಪಿಯ ಮನೆಯ ಬಳಿ ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ರಾಘವೇಂದ್ರ ಅವರನ್ನು ಆರೋಪಿಯು ಅಡ್ಡಗಟ್ಟಿ, ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿ, ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಗಂಭೀರವಾಗಿ ಗಾಯಗೊಂಡ ರಾಘವೇಂದ್ರ ಅವರನ್ನು ಮೊದಲಿಗೆ ಆನಂದಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಅವರನ್ನು ಶಿವಮೊಗ್ಗದ #Shivamogga ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಅಮೃತ್ ಲೈಫ್ ಲೈನ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದಾಗ್ಯೂ, ಚಿಕಿತ್ಸೆ ಫಲಕಾರಿಯಾಗದೇ, ವೈದ್ಯರು ಜೀವ ಉಳಿಯುವ ಸಾಧ್ಯತೆ ಇಲ್ಲವೆಂದು ತಿಳಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ.
ಮನೆಯಲ್ಲಿಯೇ ಆರೈಕೆ ಮಾಡುತ್ತಿದ್ದ ವೇಳೆ, ರಾಘವೇಂದ್ರ ಅವರು ಜೂನ್ 9, 2026 ರಂದು ಬೆಳಗಿನ ಜಾವ ಸುಮಾರು 3:45 ಗಂಟೆಗೆ ನಿಧನರಾಗಿದ್ದಾರೆ.
ಮೃತರ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಈಗಾಗಲೇ ಆನಂದಪುರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 89/2026 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ರಾಘವೇಂದ್ರ ಮೃತರಾದ ಹಿನ್ನೆಲೆಯಲ್ಲಿ ಇದೀಗ ನ್ಯಾಯಾಲಯದ ಆದೇಶ ಪಡೆದು, ಪ್ರಕರಣಕ್ಕೆ ಭಾರತೀಯ ನ್ಯಾಯ ಸಂಹಿತೆ (ಆಘೆಖ) 2023ರ ಕಲಂ 126(2), 352, 351(2), 118(2) ಜೊತೆಗೆ 103(1) ಕಲಂಗಳನ್ನು ಹೆಚ್ಚುವರಿಯಾಗಿ ಸೇರಿಸಲಾಗಿದೆ.
Also Read>> ಮಾಜಿ ಡಿಸಿಎಂ ಈಶ್ವರಪ್ಪ ಜನ್ಮದಿನ | ಸ್ವಗೃಹದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ
ಪ್ರಕರಣವು ಇದೀಗ ಗಂಭೀರ ಅಪರಾಧವಾಗಿ ಪರಿಗಣಿಸಲ್ಪಟ್ಟಿದ್ದು, ಪೊಲೀಸ್ ಇಲಾಖೆ ತುರ್ತು ವರದಿ ಸಲ್ಲಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದೆ.
ಹತ್ಯೆಗೆ ಒಳಗಾಗಿದ್ದ ರಾಘವೇಂದ್ರ ಮೃತರಾದ ಹಿನ್ನೆಲೆಯಲ್ಲಿ ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ತನಿಖೆ ಮುಂದುವರೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















