ಬೆಂಗಳೂರು: ರಾಜ್ಯ ರಾಜಕೀಯದ ದೊಂಬರಾಟದ ಹಿನ್ನೆಲೆಯಲ್ಲಿ ಗುರುಗ್ರಾಮದ ರೆಸಾರ್ಟ್’ನಲ್ಲಿ ವಾಸ್ತವ್ಯ ಹೂಡಿದ್ದ ಬಿಜೆಪಿ ಶಾಸಕರಿಗೆ ರಾಜ್ಯಕ್ಕೆ ಹಿಂತಿರುಗಿ ಬರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂಬ ಹಿನ್ನೆಲೆಯಲ್ಲಿ ಏಳು ಬಿಜೆಪಿ ಶಾಸಕರು ಗುರುಗ್ರಾಮದ ಸೆವೆನ್ ಸ್ಟಾರ್ ಹೊಟೇಲ್’ನಲ್ಲಿ ವಾಸ್ತವ್ಯ ಹೂಡಿದ್ದರು. ಆದರೆ, ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಗುರುಗ್ರಾಮದಲ್ಲಿದ್ದೆÃವೆಯೇ ಹೊರತು ಬೇರಾವುದೇ ಉದ್ದೇಶದಿಂದ ಇಲ್ಲ ಎಂದಿದ್ದಾರೆ.
ಇದೇ ವೇಳೆ ಬಿಜೆಪಿ ಶಾಸಕರನ್ನು ಮಂತ್ರಿ ಮಾಡುವ ಹಾಗೂ ಹಣ ನೀಡುವ ಆಮಿಷವೊಡ್ಡಿ ತಮ್ಮತ್ತ ಸೆಳೆಯಲು ಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
Discussion about this post