ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಬಿಎಸ್’ಸಿ ಅಗ್ರಿಕಲ್ಚರ್ ಹಾಗೂ ಬಿಟೆಕ್ ಇಂಜಿನಿಯರಿಂಗ್ ಸೇರಿದಂತೆ ಕೃಷಿ ವಿಶ್ವವಿದ್ಯಾಲಯದ ಎಲ್ಲಾ ಬಿಎಸ್ಸಿ ಅಂತಿಮ ಪದವಿ ಪರೀಕ್ಷೆಗಳು ಈಗಾಗಲೇ ಆನ್’ಲೈನ್’ನಲ್ಲಿ ಜುಲೈ 8ರೊಳಗೆ ಮುಗಿದಿದ್ದು ಜುಲೈ ಅಂತ್ಯದೊಳಗೆ ಬಿಎಸ್ಸಿ ಅಗ್ರಿ ಡಿಗ್ರಿ ಪ್ರಮಾಣಪತ್ರ ಮತ್ತು ಅಂಕಪಟ್ಟಿ ನೀಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕೋವಿಡ್ ಆರಭವಾಗುವ ಹೊತ್ತಿಗೆ 90% ಹೆಚ್‌ಓಟಿ(ಹ್ಯಾಂಡ್ಸ್ ಆನ್ ಟ್ರೈನಿಂಗ್ ಅಥವಾ ರೂರಲ್ ಎಕ್ಸ್ಟೆನ್ಷನ್ ಅಗ್ರಿಕಲ್ಚರ್ ಡೆವಲಪ್ಮೆಂಟ್ ಯೋಜನೆ) ಪ್ರಕಾರ ತರಗತಿಗಳು ಮುಗಿದಿತ್ತು.
ಗ್ರೂಪ್ ಡಿಸ್ಕಷನ್, ವರದಿ ಸಲ್ಲಿಕೆ ಬಾಕಿಯಿತ್ತು. ಈಗ ವಿದ್ಯಾರ್ಥಿಗಳನ್ನು ಸಾಮೂಹಿಕ ಚರ್ಚೆ ವರದಿ ಸಲ್ಲಿಕೆಗೆ ಸೇರಿಸಲು ಕೋವಿಡ್ ನಿಂದ ಸಾಧ್ಯವಾಗದ ಕಾರಣ ಶಿಕ್ಷಕರು ಈಗಾಗಲೇ ಆನ್ಲೈನ್ ಮೂಲಕ ಪರೀಕ್ಷೆಗಳನ್ನು ಮುಗಿಸಿರುತ್ತಾರೆ.ಗ್ರೇಡ್ ಅಂತಿಮಗೊಳಿಸಿ ಪರೀಕ್ಷಾಘಟಕಕ್ಕೆ ಜು.15ರೊಳಗೆ ಸಲ್ಲಿಸಬೇಕಿದ್ದು ಪ್ರಾವಿಝನಲ್ ಡಿಗ್ರಿ ಸರ್ಟಿಫಿಕೇಟ್ ಮತ್ತು ಅಂಕಪಟ್ಟಿ ಸಲ್ಲಿಕೆ ಜು. 15ರ ಬಳಿಕ ಆರಂಭವಾಗಲಿದ್ದು, ಬಹುತೇಕ ಜುಲೈ ಅಂತ್ಯದೊಳಗೆ ಎಲ್ಲಾ ವಿದ್ಯಾರ್ಥಿಗಳಿಗೆ ಡಿಗ್ರಿ ಅಂಕಪಟ್ಟಿ ನೀಡಲಾಗುವುದು ಎಂದರು.
ಇನ್ನು ಅಂತಿಮ ವರ್ಷದ ಎಂಎಸ್ಸಿ ಹಾಗೂ ಪಿಹೆಚ್‌ಡಿ ಪದವಿ ವಿದ್ಯಾರ್ಥಿಗಳು ತಮ್ಮ ಸಂಶೋಧನಾ ಪ್ರಬಂಧಗಳನ್ನು ಆಗಸ್ಟ್ 31ರೊಳಗೆ ಸಲ್ಲಿಸಬೇಕು. ಸೆಪ್ಟೆಂಬರ್ 15 ರಿಂದ ಫಲಿತಾಂಶ ಮತ್ತು ಪ್ರಮಾಣಪತ್ರ ಸಲ್ಲಿಕೆ ಆರಂಭವಾಗಲಿದ್ದು, ಸೆಪ್ಟೆಂಬರ್ 30ರೊಳಗೆ ಎಲ್ಲಾ ಎಂಎಸ್ಸಿ, ಪಿಹೆಚ್‌ಡಿ ವಿದ್ಯಾರ್ಥಿಗಳು ತಮ್ಮ ಪದವಿ ಮುಗಿಸಬಹುದಾಗಿದೆ.ಬಳಿಕ ಹೈಯರ್ ಎಜುಕೇಷನ್ ಮಾಡಬಹುದಾಗಿದೆ ಎಂದರು.
Get In Touch With Us info@kalpa.news Whatsapp: 9481252093
Discussion about this post