ಬೆಂಗಳೂರು: ಜೆಡಿಎಸ್ ಶಾಸಕರಿಗೆ ಆಮಿಷವೊಡ್ಡಿದ್ದಾರೆ ಎಂದು ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಆಡಿಯೋ ಬಾಂಬ್ ಸಿಡಿಸಿರುವ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಬಿಎಸ್’ವೈ, ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸಿಎಂ ಬಿಡುಗಡೆ ಮಾಡಿರುವುದು ನಕಲಿ ಆಡಿಯೋ ಕ್ಲಿಪ್ಪಿಂಗ್ ಆಗಿದೆ. ಕುಮಾರಸ್ವಾಮಿ ಒಳ್ಳೆಯ ಪ್ರೊಡ್ಯೂಸರ್. ನಾನು ಯಾರನ್ನೂ ಭೇಟಿಯಾಗಿಲ್ಲ. ನನ್ನ ವಿರುದ್ಧ ಮಾಡಿರುವ ಆರೋಪಗಳು ಸುಳ್ಳು, ಸತ್ಯಕ್ಕೆ ದೂರವಾಗಿವೆ ಎಂದು ಕಿಡಿ ಕಾರಿದರು.
ನಾನು ಸ್ಪೀಕರ್ ಅವರನ್ನೆ ಬುಕ್ ಮಾಡಿದ್ದೇನೆ ಎಂದು ಆರೋಪಿಸಲಾಗಿದೆ, ಆದರೆ ಅದು ನಿಜವೇ ಆದರೆ ನಾನು ರಾಜಕೀಯ. ನಿವೃತ್ತಿ ಹೊಂದುವುದಾಗಿ ಹೇಳಿದ್ದಾರೆ. ಇನ್ನೂ ಇಂದಿನ ಬಜೆಟ್ ಅಧಿವೇಶನಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ನ 10-11 ಶಾಸಕರು ಹಾಜರಾಗುವುದಿಲ್ಲ, ಇನ್ನು ಕೆಲವೇ ದಿನಗಳು ಕಾದು ನೋಡಿ ಎಂದು ಹೇಳಿದ್ದಾರೆ.
Discussion about this post