No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Tuesday, May 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ದಕ್ಷ

ಬುಲೆಟ್ ಸವಾರಿ-4: ಎನ್‌ಕೌಂಟರ್ ಎಂದರೆ ಹುಡುಗಾಟವಲ್ಲ-3

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 13, 2018
in ದಕ್ಷ
0
Share on FacebookShare on TwitterShare on WhatsApp

ಅಂದ ಹಾಗೆ ‘ನಕಲಿ ಎನ್‌ಕೌಂಟರ್’ ದೂರಿನ ಹಿಂದಿನ ಸೂತ್ರಧಾರ ಅಂದಿನ ಕುಖ್ಯಾತ ಡಾನ್ ಎಂ.ಪಿ. ಜಯರಾಜ್. ಪೊಲೀಸರೆಂದರೆ ಆತ ಕೆಂಡಕಾರುತ್ತಿದ್ದ. ಪೊಲೀಸರನ್ನು ವಾಚಾಮಗೋಚರ ನಿಂದಿಸಲೆಂದೇ ‘ಗರೀಬಿ ಹಟಾವೊ’ ಹೆಸರಿನ ಪತ್ರಿಕೆ ಹೊರತರುತ್ತಿದ್ದ. ಆತ ಎಂಥ ವಿಲಕ್ಷಣ ಆಸಾಮಿ ಎಂದರೆ, ಒಮ್ಮೆ ಎಂಎಲ್‌ಸಿ ಚುನಾವಣೆಗೆ ಸ್ಪರ್ಧಿಸಿದ್ದ. ಆತನ ಚುನಾವಣಾ ಗುರುತು ಹುಲಿ. ಸರ್ಕಸ್‌ನಿಂದ ಜೀವಂತ ಬೋನಿನಲ್ಲಿಟ್ಟಿದ್ದ ಹುಲಿಯನ್ನು ತರಿಸಿ ಪ್ರಚಾರದ ಮೆರವಣಿಗೆ ನಡೆಸಿದ್ದ. ಪ್ರಕರಣವೊಂದರಲ್ಲಿ ಸೆಂಟ್ರಲ್ ಜೈಲ್ ಸೇರಿದ್ದ ಆತ, ಅಲ್ಲಿಂದಲೇ ಸಂಚು ರೂಪಿಸಿ ತನ್ನ ವಕೀಲ ಎಂ.ವಿ. ವರ್ಧಮಾನಯ್ಯ ಎಂಬುವರ ಮೂಲಕ ಮಹಿಳೆಯೊಬ್ಬಳನ್ನು ಎತ್ತಿ ಕಟ್ಟಿ ನಕಲಿ ಎನ್‌ಕೌಂಟರ್‌ನ ದೂರು ಕೊಡಿಸಿದ್ದ.

ರಶೀದ್ ಕೊಲೆ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಬಿಐ ಅಧಿಕಾರಿಯ ಕೈಗೇ ಈ ತನಿಖೆಯೂ ಹಸ್ತಾಂತರವಾಯಿತು. ಹಾಗಾಗಿ ನಮ್ಮ ಬಂಧನ ಗ್ಯಾರಂಟಿ ಎಂಬ ಮಾತು ಕೇಳಿ ಬಂತು. ರಾಜ್ಯದ ಜನತಾ ಪಕ್ಷದ ಸರಕಾರವನ್ನು ಬೀಳಿಸಲು ಕೇಂದ್ರದ ಕಾಂಗ್ರೆಸ್ ಸರಕಾರ ಹವಣಿಸುತ್ತಿದೆ. ಹಾಗಾಗಿ ಅದು ಸಿಬಿಐಯನ್ನು ಬಳಸಿಕೊಂಡು, ಈ ಪ್ರಕರಣದಲ್ಲಿ ರಾಜ್ಯ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲಿದೆ ಎಂಬ ಮಾತೂ ಕೇಳಿ ಬಂತು.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ, ಲೋಕಾಯುಕ್ತರಾಗಿ ಖ್ಯಾತಿ ಗಳಿಸಿ ನಿವೃತ್ತರಾಗಿರುವ ನ್ಯಾ.ಎನ್.ಸಂತೋಷ್ ಹೆಗ್ಡೆ ಅವರು ಆಗ ಹೈಕೋರ್ಟ್ ವಕೀಲರಾಗಿದ್ದರು. ನಾವು ಅವರನ್ನು ಲೇವಲ್ಲಾ ರಸ್ತೆಯಲ್ಲಿದ್ದ ಅವರ ಕಛೇರಿಯಲ್ಲಿ ಭೇಟಿಯಾಗಿ ಸುಖಾಸುಮ್ಮನೆ ನಮ್ಮನ್ನು ತನಿಖೆಯ ಬಲೆಯಲ್ಲಿ ಸಿಲುಕಿಸಿದರೆ ನಿರ್ಭಯವಾಗಿ ಕರ್ತವ್ಯ ನಿರ್ವಹಿಸುವುದಾದರು ಹೇಗೆ ಎಂದು ಅಳಲು ತೋಡಿಕೊಂಡೆವು. ಅವರು ಸಿಬಿಐ ತನಿಖೆ ವಿರುದ್ಧ ಹೈಕೋರ್ಟ್‌ನಲ್ಲಿ ರಿಟ್ ಸಲ್ಲಿಸಿದರು. ಮುಖ್ಯ ನ್ಯಾಯಮೂರ್ತಿ ಪೀಠದ ಮುಂದೆ ಅರ್ಜಿ ವಿಚಾರಣೆಗೆ ಬಂತು. ನ್ಯಾ. ಸಂತೋಷ್ ಹೆಗ್ಡೆ ಸುಮಾರು ಒಂದು ಗಂಟೆ ಕಾಲ ನಿರರ್ಗಳವಾಗಿ ಸಾಕ್ಷ್ಯಾಧಾರ ಸಮೇತ ವಾದಿಸಿದರು.

ಸಿಬಿಐ ತನಿಖೆಯ ಆದೇಶವನ್ನು ವಜಾ ಮಾಡಿದ ನ್ಯಾಯಪೀಠ, ಇಲಾಖಾ ತನಿಖೆಗೆ ಆದೇಶಿಸಿತು. ಡಿಸಿಪಿ ಟಿ.ಜಯಪ್ರಕಾಶ್ ತನಿಖೆ ನಡೆಸಿ, ಆರೋಪ ನಿರಾಧಾರ ಎಂದು ವರದಿ ಸಲ್ಲಿಸಿದರು. ಈ ವರದಿಯನ್ನ ಆ ಮಹಿಳೆ ಮೂಲಕ ಮತ್ತೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಯಿತು. ಡಿಸಿಪಿ ಬೇಕಲ್ ಮೂಲಕ ಮತ್ತೊಮ್ಮೆ ತನಿಖೆ ನಡೆಯಿತು. ಅವರೂ ‘ಬಿ’ ರಿಪೋರ್ಟ್ ಸಲ್ಲಿಸಿದರು. ಅಂತೂ ನಾವು ನಕಲಿ ಎನ್‌ಕೌಂಟರ್ ಆರೋಪದ ಕುಣಿಕೆಯಿಂದ ಪಾರಾದೆವು. ಆದರೆ ಇಷ್ಟಾಗುವಷ್ಟರಲ್ಲಿ ನಾಲ್ಕು ವರ್ಷ ಕಳೆದು ಹೋಗಿದ್ದವು. ಅಷ್ಟು ವರ್ಷ ನಾವು ಮಾನಸಿಕ ಕಿರಿಕಿರಿ ಅನುಭವಿಸಿದ್ದಂತೂ ಸತ್ಯ. ಈ ನಡುವೆ ರೌಡಿ ಜಯರಾಜ್ ಹಾಡಹಗಲೇ ನಡುರಸ್ತೆಯಲ್ಲಿ ಕೊಲೆಯಾಗಿ ಹೋದ. ದೂರು ಕೊಡಿಸುವಲ್ಲಿ ಮುಖ್ಯ ಪಾತ್ರ ವಹಿಸಿದ್ದ ಆತನ ವಕೀಲ ವರ್ಧಮಾನಯ್ಯ ಕೂಡ ಆತನ ಜೊತೆಗೆ ಬಲಿಯಾದ.
ಆಗ ಹೈಕೋರ್ಟ್ ವಕೀಲರಾಗಿದ್ದ ನ್ಯಾ. ಸಂತೋಷ್ ಹೆಗ್ಡೆ ಅವರು ಒಂದೇ ಒಂದು ರೂಪಾಯಿಯನ್ನು ಪಡೆಯದೆ ಹೈಕೋರ್ಟ್‌ನಲ್ಲಿ ನಮ್ಮ ಪರ ವಾದಿಸಿ, ಸಮಾಜ ಘಾತುಕ ಶಕ್ತಿಗಳ ಹುನ್ನಾರವನ್ನು ವಿಫಲಗೊಳಿಸಿದರು.
(ಮುಂದುವರೆಯುವುದು)

Tags: M P JayarajPolice EncounterSanthosh HegdeTiger BB Ashok Kumar
Share196Tweet123Send
Previous Post

ಉತ್ತರ ಕೊರಿಯಾ ಎಂಬ ನರಕ-9: ಕಿಮ್‌ ಕೈಯಲ್ಲಿ ಸೇನಾ ಹಿಡಿತ

Next Post

ಉತ್ತರ ಕೊರಿಯಾ ಎಂಬ ನರಕ-10: ಆ ಅಧಿಕಾರಿಯನ್ನು ನಾಯಿಯಂತೆ ನಡೆಸಿಕೊಂಡರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಉತ್ತರ ಕೊರಿಯಾ ಎಂಬ ನರಕ-10: ಆ ಅಧಿಕಾರಿಯನ್ನು ನಾಯಿಯಂತೆ ನಡೆಸಿಕೊಂಡರು

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಇಂದಿನಿಂದ ಪಶ್ಚಿಮ ಬಂಗಾಳದಲ್ಲಿ ಹೊಸ ಸೂರ್ಯ ಉದಯಿಸುತ್ತಾನೆ | ಪ್ರಧಾನಿ ನರೇಂದ್ರ ಮೋದಿ

ಇಂದಿನಿಂದ ಪಶ್ಚಿಮ ಬಂಗಾಳದಲ್ಲಿ ಹೊಸ ಸೂರ್ಯ ಉದಯಿಸುತ್ತಾನೆ | ಪ್ರಧಾನಿ ನರೇಂದ್ರ ಮೋದಿ

May 4, 2026
ಆಗುಂಬೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು | ಅಪಾಯದಿಂದ ಪಾರು

ಆಗುಂಬೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು | ಅಪಾಯದಿಂದ ಪಾರು

May 4, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಸಾರ್ವಜನಿಕ ಉದ್ಯಮಗಳ ಸಮಿತಿಗೆ ಸಂಸದ ಬಿ.ವೈ. ರಾಘವೇಂದ್ರ ಸತತ ಮೂರನೇ ಬಾರಿಗೆ ಆಯ್ಕೆ

May 4, 2026
ವಿಜಯ್’ಗಾಗಿ ತಿರುಪತಿಯಲ್ಲಿ ಪೂಜೆ ಮಾಡಿಸಿದ ನಟಿ ತ್ರಿಶಾ ಟಿವಿಕೆ ಸಂಪುಟದಲ್ಲಿ ಡಿಸಿಎಂ?

ವಿಜಯ್’ಗಾಗಿ ತಿರುಪತಿಯಲ್ಲಿ ಪೂಜೆ ಮಾಡಿಸಿದ ನಟಿ ತ್ರಿಶಾ ಟಿವಿಕೆ ಸಂಪುಟದಲ್ಲಿ ಡಿಸಿಎಂ?

May 4, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಯಶವಂತಪುರ-ವಿಜಯಪುರ, ಸಿಂಧನೂರು, ಹಿಂದೂಪುರ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

May 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL