ಕಲ್ಪ ಮೀಡಿಯಾ ಹೌಸ್ | ಜೈಪುರ |
ಜೈಸಲ್ಮೇರ್’ನಿಂದ ಜೋದ್ಬುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಏಕಾಏಕಿ ಬೆಂಕಿಗೆ ಆಹುತಿಯಾಗಿದ್ದು, 20 ಮಂದಿ ಸಜೀವವಾಗಿ ದಹನಗೊಂಡಿರುವ ಘಟನೆ ನಡೆದಿದೆ.
ಜೈಸಲ್ಮೇರ್’ನಿಂದ ಜೋದ್ಬುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್’ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಮಾತ್ರದಲ್ಲಿ ಇಡೀ ಬಸ್’ಗೆ ಬೆಂಕಿ ವ್ಯಾಪಿಸಿದೆ.
ಪರಿಣಾಮವಾಗಿ ಮಹಿಳೆಯರು ಹಾಗೂ ಮಕ್ಕಳೂ ಸೇರಿ 20 ಪ್ರಯಾಣಿಕರು ಜೀವಂತವಾಗಿ ಸುಟ್ಟುಹೋಗಿದ್ದಾರೆ. ಘಟನೆಯಲ್ಲಿ 16 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಬಸ್ ತನ್ನ ದೈನಂದಿನ ವೇಳಾಪಟ್ಟಿಯ ಪ್ರಕಾರ ಜೈಸಲ್ಮೇರ್’ನಿಂದ ಹೊರಟು ನಿರ್ಜನ ನಗರದಿಂದ ಸುಮಾರು 20 ಕಿಲೋಮೀಟರ್ ದೂರದಲ್ಲಿರುವ ಯುದ್ಧ ವಸ್ತುಸಂಗ್ರಹಾಲಯದ ಬಳಿ ತಲುಪಿದಾಗ, ಅದರ ಹಿಂಭಾಗದಿಂದ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿಗೆ ಕಾರಣವೇನು?
ಬೆಂಕಿಗೆ ನಿಖರವಾದ ಕಾರಣ ಇನ್ನೂ ಪತ್ತೆಯಾಗಿಲ್ಲ. ಆದರೂ ವಾಹನದೊಳಗೆ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ ಎಂದು ಶಂಕಿಸಲಾಗಿದೆ. ತಾಂತ್ರಿಕ ತಂಡದೊಂದಿಗೆ ಆಡಳಿತ ಅಧಿಕಾರಿಗಳು ವಿವರವಾದ ತನಿಖೆಯನ್ನು ಪ್ರಾರಂಭಿಸಿದ್ದಾರೆ.
ಪೋಕ್ರಾನ್ ಬಿಜೆಪಿ ಶಾಸಕ ಪ್ರತಾಪ್ ಪುರಿ, 20 ಪ್ರಯಾಣಿಕರ ಸಾವಿನ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಇನ್ನು, ಈ ಘಟನೆ ಸೇನಾ ಪ್ರದೇಶಕ್ಕೆ ಸಮೀಪದಲ್ಲಿ ನಡೆದಿದ್ದರಿಂದ, ಸ್ಥಳಕ್ಕೆ ತಲುಪಿ ಸೇನಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.
ಗಾಯಾಳುಗಳಿಗೆ ಆರಂಭದಲ್ಲಿ ಸೇನಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಜೈಸಲ್ಮೇರ್’ಗೆ ಸ್ಥಳಾಂತರಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜೋಧ್ಪುರಕ್ಕೆ ಕರೆದೊಯ್ಯಲಾಗಿದೆ.
ಪ್ರಧಾನಿ ಸಂತಾಪ, ಪರಿಹಾರ ಘೋಷಣೆ
ಇನ್ನು, ಘಟನೆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಆಘಾತ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಜೈಸಲ್ಮೇರ್ ಬಸ್ ಬೆಂಕಿ ಅವಘಡದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದರೆ. ರಾಜಸ್ತಾನದ ಜೈಸಲ್ಮೇರ್’ನಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾಗಿದೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ಜನರು ಮತ್ತು ಅವರ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಪ್ರತಿಯೊಬ್ಬರ ಹತ್ತಿರದ ಸಂಬಂಧಿಕರಿಗೆ 2 ಲಕ್ಷ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ನೀಡಲಾಗುವುದು ಎಂದು ತಿಳಿಸಲಾಗಿದೆ.
ಆಸ್ಪತ್ರೆಗೆ ಸಿಎಂ ಭೇಟಿ
ಇನ್ನು, ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ಜೋಧ್ ಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದರು.
ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಶರ್ಮಾ, ಈ ಘಟನೆ ಅತ್ಯಂತ ಹೃದಯ ವಿದ್ರಾವಕವಾಗಿದೆ. ಈ ದುರಂತ ಅಪಘಾತದಿಂದ ಹಾನಿಗೊಳಗಾದವರಿಗೆ ನಾನು ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರಿಗೆ ಸರಿಯಾದ ಚಿಕಿತ್ಸೆ ನೀಡಲು ಮತ್ತು ಮೃತರ ಕುಟುಂಬಸ್ಥರಿಗೆ ಪರಿಹಾರ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post