ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಿತ್ರದುರ್ಗ: ಜಿಲ್ಲಾಧಿಕಾರಿಯವರು ಸಂಚರಿಸುತ್ತಿದ್ದ ಕಾರಿಗೆ ಸರ್ಕಾರಿ ಬಸ್ ವೇಗವಾಗಿ ಡಿಕ್ಕಿ ಹೊಡೆದಿದ್ದು, ಸ್ವಲ್ಪದಲ್ಲಿ ಭಾರೀ ಅನಾಹುತ ಸಂಭವಿಸಿದೆ.
ಇಂದು ಮಧ್ಯಾಹ್ನ ಹೊಳಲ್ಕೆರೆ ಚಿತ್ರಹಳ್ಳಿ ಗ್ರಾಮದ ಪೆಟ್ರೋಲ್ ಬಂಕ್ ಸಮೀಪ ಬಳಿಯಲ್ಲಿ ಈ ಘಟನೆ ನಡೆದಿದ್ದು, ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಸಂಚರಿಸುತ್ತಿದ್ದ ಕಾರಿಗೆ ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಎದುರಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದರೂ ಸಹ ಅದೃಷ್ಠವಷಾತ್ ಜಿಲ್ಲಾಧಿಕಾರಿಯವರು ಅಪಾಯದಿಂದ ಪಾರಾಗಿದ್ದಾರೆ. ಕಾರಿನ ಏರ್‌ಬ್ಯಾಗ್ ತೆರೆದುಕೊಂಡ ಪರಿಣಾಮ ಜಿಲ್ಲಾಧಿಕಾರಿ ಸೇರಿ ಮೂವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ವಿನೋತ್ ಪ್ರಿಯಾ ಅವರು ಚಿತ್ರದುರ್ಗದಿಂದ ಹೊಳಲ್ಕೆರೆಗೆ ತೆರಳುತ್ತಿದ್ದರು. ಹೊಳಲ್ಕೆರೆಯಿಂದ ಚಿತ್ರದುರ್ಗಕ್ಕೆ ಸಾರಿಗೆ ಬಸ್ ಬರುತ್ತಿತ್ತು. ಚಿತ್ರಹಳ್ಳಿ ಬಳಿ ಪೆಟ್ರೋಲ್ ಬಂಕ್ ಸಮೀಪ ಜಾನುವಾರುವೊಂದು ಏಕಾಏಕಿ ರಸ್ತೆಗೆ ಬಂದಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಧಿಕಾರಿಯವರು ಬದಲಿ ಕಾರಿನ ಮೂಲಕ ಚಿತ್ರದುರ್ಗಕ್ಕೆ ತೆರಳಿದ್ದಾರೆ. ಅಪಘಾತದಿಂದ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಚಿತ್ರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
(ವರದಿ: ಸುರೇಶ್ ಬೆಳಗೆರೆ, ಚಿತ್ರದುರ್ಗ)
Get in Touch With Us info@kalpa.news Whatsapp: 9481252093
















