ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯ ಹೊಳಲೂರು ಸಮೀಪದ ಹೊಳೆಹಟ್ಟಿ ಬಳಿ ದಾವಣಗೆರೆಯಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಜಖಂಗೊಂಡಿರುವ ಘಟನೆ ನಡೆದಿದೆ.
ಅಪಘಾತದ ತೀವ್ರತೆಗೆ ಬಸ್‌ಗೆ ಸಾಕಷ್ಟು ಹಾನಿಯಾಗಿದ್ದರೂ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್‌ನಲ್ಲಿದ್ದ 7ರಿಂದ 8 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾದ್ದು, ತಕ್ಷಣವೇ ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ.

Also read: ಉದ್ಯಮಶೀಲ ಮನೋಭಾವವೇ ಯಶಸ್ಸಿನ ಮೂಲ: ಸುಮಿತ್ ಪಾಟೀಲ್
ರಸ್ತೆ ಬದಿಯಲ್ಲಿ ನಿಂತಿದ್ದ ಓಮಿನಿ ವಾಹನ ಇದ್ದಕ್ಕಿದ್ದಂತೆ ಬಲಭಾಗಕ್ಕೆ ಚಾಲಾಯಿಸಿದ್ದು, ಇದೇ ಸಂದರ್ಭದಲ್ಲಿ ಸಿಮೆಂಟ್ ತುಂಬಿದ ಬೊಲೇರೋ ವಾಹನ ಅಡ್ಡ ಬಂದಿದ್ದು, ಅಪಘಾತ ತಪ್ಪಿಸುವ ಉದ್ದೇಶದಿಂದ ಚಾಲಕ ಏಕಾಏಕಿ ಬಸ್ ಅನ್ನು ಎಡಭಾಗಕ್ಕೆ ತಿರುಗಿಸಿದ್ದಾರೆ. ಈ ವೇಳೆ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಘಟನೆಯಿಂದ ಕೆಲಕಾಲ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









