ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿರುವ ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಮೂಲಸೌಲಭ್ಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಮಾಡಿದರು.
ನವದೆಹಲಿಯಲ್ಲಿ ಸಚಿವರನ್ನು ಭೇಟಿಯಾಗಿ ಮನವಿ ಮಾಡಿದ ಅವರು, ವಾರಕ್ಕೊಮ್ಮೆ ಇರುವ ರೈಲು ಸಂಖ್ಯೆ 10215/10216 ರೈಲನ್ನು ಮೂಕಾಂಬಿಕಾ ಎಕ್ಸ್’ಪ್ರೆಸ್ ಎಂದು ನಾಮಕರಣ ಮಾಡಿ ದಿನಂಪ್ರತಿ ಸೇವೆ ನೀಡುವಂತೆ ಮನವಿ ಮಾಡಿದರು. ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಮೂಲಸೌಲಭ್ಯ ಅಭಿವೃದ್ಧಿ, ಬಿಜೂರು ರೈಲು ನಿಲ್ದಾಣ ಹಾಗೂ ಸೇನಾಪುರ ರೈಲ್ವೆ ನಿಲ್ದಾಣದಲ್ಲಿ ಪ್ರಾಯೋಗಿಕ ಮೆಮು, ಮತ್ಸ್ಯಗಂಧ ಹಾಗೂ ಪಂಚಗಂಗಾ ಎಕ್ಸ್’ಪ್ರೆಸ್ ರೈಲು ನಿಲುಗಡೆಗೆ ಮನವಿ ಮಾಡಿದರು.
ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವರು ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post