ಬೈಂದೂರು: ತಾಲೂಕಿನ ಕಂಬದಕೋಣೆ ಗ್ರಾಮದ ಎಡಮಾವಿನಹೊಳೆ ಬೊಬ್ಬರ್ಯ ಗುಂಡಿ ಹೊಳೆಯಲ್ಲಿ ಬಿದ್ದು ಮೃತಪಟ್ಟ ಇಬ್ಬರು ವಿದ್ಯಾರ್ಥಿಗಳ ಮನೆಗಳಿಗೆ ಮಂಗಳವಾರ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಮೃತ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿದ ಶಾಸಕರು, ವೈಯಕ್ತಿಕವಾಗಿ ತಲಾ 50 ಸಾವಿರ ರೂ. ಪರಿಹಾರ ವಿತರಿಸಿದರು.
ಮೃತ ವಿದ್ಯಾರ್ಥಿಗಳ ಮನೆಯ ಇಬ್ಬರು ಹೆಣ್ಣು ಮಕ್ಕಳಿಗೆ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಶಾಲೆಯಲ್ಲಿ ಪಿಯುಸಿವರೆಗೆ ಸಮವಸ್ತ್ರ, ಪುಸ್ತಕ ಸಹಿತ ಉಚಿತ ಶಿಕ್ಷಣ ನೀಡಲಾಗುವುದು ಎಂದು ಭರವಸೆ ನೀಡಿದರು.
ಅಲ್ಲದೇ, ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲು ಜಿಲ್ಲಾಧಿಕಾರಿಗಳ ಮೂಲಕ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಯಿತು.
ಈ ಬಗ್ಗೆ ಸಂಸದ ಬಿ.ವೈ. ರಾಘವೇಂದ್ರ ಅವರು ಜಿಲ್ಲಾಧಿಕಾರಿಯವರಿಗೆ ಸೂಚಿಸಿದ್ದು, ಮುಖ್ಯಮಂತ್ರಿಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಪರಿಹಾರ ನೀಡುವಂತೆ ಮನವಿ ಮಾಡಲಾಗುವುದು ಎಂದು ಹೇಳಿದರು.
Get In Touch With Us info@kalpa.news Whatsapp: 9481252093, 94487 22200
Discussion about this post