ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೈಂದೂರು: ಸಮಸ್ತ ಹಿಂದೂಗಳ ಆರಾಧ್ಯ ದೈವ ಪ್ರಭು ಶ್ರೀ ರಾಮಚಂದ್ರನ ಆಯೋಧ್ಯಾ ಮಂದಿರ ನಿರ್ಮಾಣಕ್ಕೆ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು 1 ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಇಂದು 1 ಲಕ್ಷ ರೂ.ಗಳ ಚೆಕ್ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋಟ್ಯಂತರ ಹಿಂದೂಗಳ ಕನಸು ಈಗ ನನಸಾಗುತ್ತಿರುವುದು ಸಂತಸದ ಸಂಗತಿ. ರಾಮ ಮಂದಿರ ನಿರ್ಮಾಣವಾಗುತ್ತಿರುವ ಈ ಕಾಲಘಟ್ಟದಲ್ಲಿ ನಾವೆಲ್ಲರೂ ಇದ್ದೇವೆ, ಇಂತಹ ಪುಣ್ಯ ಕಾರ್ಯಕ್ಕೆ ಅಳಿಲು ಸೇವೆ ಸಲ್ಲಿಸುವ ಅವಕಾಶ ನಮಗೂ ದೊರೆತಿರುವುದು ನಮ್ಮೆಲ್ಲರ ಪುಣ್ಯ ಎಂದು ಸಂತಸ ವ್ಯಕ್ತಪಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post