ಬೈಂದೂರು: ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶವನ್ನು ಹೊಂದಿರುವ ಸೋಮೇಶ್ವರ ಹಾಗೂ ಮರವಂತೆ ಬೀಚ್ ಅಭಿವೃದ್ಧಿಗೆ ರಾಜ್ಯ ಸರ್ಕಾರ ತಲಾ 5 ಕೋಟಿ ರೂ. ಅನುದಾನ ನೀಡಿದೆ.
ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿವೆ. ಆದರೆ, ಇವಕ್ಕೆ ಕೆಲವು ತಾಂತ್ರಿಕ ಸಮಸ್ಯೆಗಳು ಕಾಡುತ್ತಿವೆ. ಇದನ್ನು ಮನಗಂಡ ಕ್ರಿಯಾಶೀಲ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು, ರಾಜ್ಯ ಸರ್ಕಾರದೊಂದಿಗೆ ಮಾತನಾಡಿ ಸೋಮೇಶ್ವರ ಹಾಗೂ ಮರವಂತೆ ಬೀಚ್ ಅಭಿವೃದ್ಧಿಗಾಗಿ ತಲಾ 5 ಕೋಟಿ ರೂ.ಅನುದಾನ ಬಿಡುಗಡೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಜೊತೆಯಲ್ಲಿ ಸ್ಥಳ ಪರಿಶೀಲನೆ ನಡೆಸಿದ ಶಾಸಕರು, ಪ್ರಥಮ ಹಂತದಲ್ಲಿ ನಡೆಸಲು ಉದ್ದೇಶಿಸಿರುವ ಕಾಮಗಾರಿಗಳ ಬಗ್ಗೆ ತಿಳಿಸಿದರು. ಮುಂದಿನ ಹಂತದಲ್ಲಿ ಇನ್ನಷ್ಟು ಅನುದಾನ ತರಲು ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
Get In Touch With Us info@kalpa.news Whatsapp: 9481252093, 94487 22200






Discussion about this post