ಕಲ್ಪ ಮೀಡಿಯಾ ಹೌಸ್
ಬೈಂದೂರು: ಶೀಘ್ರ ಆಕ್ಸಿಜನ್ ಪೂರೈಕೆ ಮಾಡುವ ಸಲುವಾಗಿ ಬೈಂದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಆನ್‌ಸೈಟ್ ಆಕ್ಸಿಜನ್ ಉತ್ಪಾದನ ಘಟಕ ಆರಂಭ ಮಾಡುವ ನಮ್ಮ ಮನವಿಯನ್ನು ಮನ್ನಿಸಿ ರಾಜ್ಯ ಸರ್ಕಾರ ಮಂಜೂರು ಮಾಡಿದೆ ಎಂದು ಶಾಸಕ ಬಿ.ಎಮ್. ಸುಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ಪ್ರತಿದಿನ 80 ಸಿಲಿಂಡರ್ ಮೆಡಿಕಲ್ ಆಕ್ಸಿಜನ್ ಉತ್ಪಾದನೆ ಆಗುವ ಘಟಕ ಮಂಜೂರಾಗಲು ಸಹಕರಿಸಿದ ಶಿವಮೊಗ್ಗ ಸಂಸz ಬಿ.ವೈ. ರಾಘವೇಂದ್ರ ಅವರಿಗೆ ಶಾಸಕರು ಧನ್ಯವಾದ ತಿಳಿಸಿದ್ದಾರೆ.

ಬೈಂದೂರು ಸಾರ್ವಜನಿಕ ಆಸ್ಪತ್ರೆಯ ಆಕ್ಸಿಜನ್ ಘಟಕ ನಿರ್ಮಾಣ ಆಗಲಿರುವ ಸ್ಥಳಕ್ಕೆ ಭೇಟಿ ನೀಡಿ, ಆಸ್ಪತ್ರೆಯ ವೈದ್ಯರು ಮತ್ತು ಗುತ್ತಿಗೆದಾರ ಕಂಪನಿ ಪ್ರತಿನಿಧಿಗಳಿಂದ ಮಾಹಿತಿ ಪಡೆದರು. ಒಂದು ತಿಂಗಳಲ್ಲಿ ಈ ಘಟಕ ಸೇವೆಗೆ ಲಭ್ಯವಾಗಲಿದ್ದು, ಕ್ಷೇತ್ರದಲ್ಲಿ ಕೋವಿಡ್ ಸಂತ್ರಸ್ತರಿಗೆ ಯಾವುದೇ ವೈದ್ಯಕೀಯ ಕೊರತೆಯಾಗದಂತೆ ಜಿಲ್ಲಾ ಅರೋಗ್ಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















