ಕಲ್ಪ ಮೀಡಿಯಾ ಹೌಸ್
ಬೈಂದೂರು: ಗ್ರಾಮೀಣ ಭಾಗಗಳನ್ನು ಹೆಚ್ಚು ಒಳಗೊಂಡಿರುವ ಕ್ಷೇತ್ರ ಬೈಂದೂರು. ಇಲ್ಲಿನ ಬಹಳಷ್ಟು ಪ್ರದೇಶಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಇದ್ದು, ಜನರು ಸಂವಹನ ಸಮಸ್ಯೆಯನ್ನು ಎದುರಿಸುತ್ತಿರುವುದನ್ನು ಗಮನಿಸಿ ಶಾಸಕ ಬಿ.ಎಮ್. ಸುಕುಮಾರ ಶೆಟ್ಟೆಇ ನೆಟ್‌ವರ್ಕ್ ಆಪರೇಟರ್‌ಗಳೊಂದಿಗೆ ಸಭೆ ನಡೆಸಿದರು.
ಪ್ರಸ್ತುತ ಲಾಕ್‌ಡೌನ್ ಕಾರಣದಿಂದ ಎಲ್ಲಾ ಶಾಲಾ ಕಾಲೇಜುಗಳ ಶಿಕ್ಷಣ ಆನ್‌ಲೈನ್ ಮೂಲಕ ನಡೆಯುತ್ತಿದೆ. ಮೊಬೈಲ್‌ನ ಅವಲಂಬಿತ ಪ್ರಸಕ್ತ ಶಿಕ್ಷಣದಿಂದಾಗಿ ವಿದ್ಯಾರ್ಥಿಗಳಿಗೆ ನೆಟ್‌ವರ್ಕ್ ಅತಿ ಅಗತ್ಯವಾಗಿದ್ದು, ಗುಡ್ಡಗಾಡು ಪ್ರದೇಶಗಳಲ್ಲಿ ಮಳೆಯಲ್ಲಿ ನಿಂತುಕೊಳ್ಳುವುದು, ಕಿಲೋ ಮೀಟರ್‌ಗಟ್ಟಲೆ ಹೋಗಬೇಕಾಗಿದೆ. ಕಾಡು ಪ್ರಾಣಿಗಳ ಕಾಟ, ಹೀಗೆ ಅನೇಕ ಸಮಸ್ಯೆಗಳನ್ನು ಎದುರಿಸುತಿರುವುದು, ತಮ್ಮ ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಸಮಗ್ರ ಬೈಂದೂರಿನ ನೆಟ್‌ವರ್ಕ್ ಸಮಸ್ಯೆಗೆ ಮುಕ್ತಿ ಕೊಡುವಂತೆ ಆಪರೇಟರ್‌ಗಳೊಂದಿಗೆ ಚರ್ಚೆ ನಡೆಸಿದರು.
ಕನ್ವರ್ಷನ್ ಭೂಮಿ ಬೇಕು ಎಂಬ ಕಾರಣಕ್ಕೆ ಹೊಸದಾಗಿ ಟವರ್ ಮಾಡುವಲ್ಲಿ ಜಾಗಗಳ ಸಮಸ್ಯೆ ಎದುರಾಗುತಿತ್ತು. ಹಾಗಾಗಿ ಅದರಿಂದ ವಿನಾಯತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮತ್ತು ಮುಖ್ಯ ಕಾರ್ಯದರ್ಶಿಗಳಿಗೆ (ಸಿಎಸ್) ಮಾತನಾಡಿ, ಗ್ರಾಮ ಪಂಚಾಯತ್ ಎನ್‌ಒಸಿ ಸಮಸ್ಯೆ ಎದುರಿಸುತಿದ್ದ ಗಂಗೊಳ್ಳಿ, ಕಟ್‌ಬೆಲ್ತೂರು ಪಂಚಾಯತ್ ಪಿಡಿಓಗಳನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಿ, ಶೀಘ್ರ ಅನುಮತಿ ನೀಡುವಂತೆ ಸೂಚಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post