ಕಲ್ಪ ಮೀಡಿಯಾ ಹೌಸ್ | ಬೈಂದೂರು |
ಬಿಜೆಪಿಯವರು ಹಿಂದೂ-ಮುಸ್ಲಿಮರ ನಡುವೆ ದ್ವೇಷದ ವಿಷ ಬೀಜ ಬಿತ್ತುತ್ತಿದ್ದಾರೆ ಎಂದು ನಟ ದುನಿಯಾ ವಿಜಯ್ #Actor Duniya Vijay ದೂರಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #Geetha Shivarajkumar ಪರ ಮತಯಾಚನೆ ವೇಳೆ ಮಾತನಾಡಿದ ಅವರು, ಬಿಜೆಪಿಯವರು ಹಿಂದೂ- ಮುಸ್ಲಿಂರ ನಡುವೆ ವಿಷ ಬೀಜ ಬಿತ್ತಿ ಸಮಾಜದಲ್ಲಿ ಬಿರುಕು ಮೂಡಿಸುತ್ತಿದ್ದಾರೆ. ಆದ್ದರಿಂದ, ಕೈ ಮುಗಿದು ಕೇಳಿಕೊಳ್ಳುತ್ತೇನೆ. ಅದಕ್ಕೆ ಅವಕಾಶ ಕಲ್ಪಿಸಿಕೊಡಬೇಡಿ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದು ನಟ ದುನಿಯಾ ವಿಜಯ್ ಹೇಳಿದರು.

Also read: ಶಿವಮೊಗ್ಗ | ತ್ಯಾವರೆಕೊಪ್ಪದಲ್ಲಿ ಮಹಿಳೆ ಮೇಲೆ ಹಲ್ಲೆ | ದೂರು ದಾಖಲು
ನಟ ಶಿವರಾಜಕುಮಾರ #Shivarajkumar ಮಾತನಾಡಿ, ಮಾನವೀಯತೆಯ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು. ಬಡವರ ಸಮಸ್ಯೆಗಳಿಗೆ ನೆರವಾಗಲಿ ಎನ್ನುವ ಉದ್ದೇಶದಿಂದ ಸರ್ಕಾರವನ್ನು ಆಯ್ಕೆ ಮಾಡುವುದು. ಇಲ್ಲಿ ಕೇವಲ ಭರವಸೆಗಳಿಗೆ ಮರಳಾಗಕೂಡದು. ಇಲ್ಲಿ ಸೇವೆ ಸಲ್ಲಿಸಲು ಗೀತಾಗೆ ಅವಕಾಶ ಕಲ್ಪಿಸಿಕೊಡಿ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post