ಕಲ್ಪ ಮೀಡಿಯಾ ಹೌಸ್ | ಬೈಂದೂರು |
ಅಧಿವೇಶದಲ್ಲಿ ವಸತಿ ರಹಿತರ ಪರವಾಗಿ ಬೈಂದೂರು ಶಾಸಕ ಬಿ.ಎಮ್. ಸುಕುಮಾರ ಶೆಟ್ಟಿ ಅವರು ಮಾತನಾಡಿದ ಪರಿಣಾಮ ವಸತಿ ಸಚಿವ ವಿ. ಸೋಮಣ್ಣ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಗ್ರಾಮೀಣ ಪ್ರದೇಶಕ್ಕೆ 4 ಲಕ್ಷ ಮನೆಗಳ ಹೊಸ ಗುರಿಗೆ ಆದೇಶ ಹೊರಡಿಸಿದ್ದು, ಈ ಬಗ್ಗೆ ಅರ್ಹ ಫಲಾನುಭವಿಗಳ ಆಯ್ಕೆ ಕುರಿತಂತೆ ಸದ್ಯದಲ್ಲೇ ಎಲ್ಲಾ ಗ್ರಾಮ ಪಂಚಾಯತ್ ಸದಸ್ಯರೊಂದಿಗೆ ಸಭೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಜನಪರ ಕಾಳಜಿ ತೋರಿಸಿದ ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಹಾಗೂ ವಸತಿ ಸಚಿವ ವಿ. ಸೋಮಣ್ಣ ಅವರಿಗೆ ಕ್ಷೇತ್ರದ ಜನತೆ ಧನ್ಯವಾದ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post