ಕಲ್ಪ ಮೀಡಿಯಾ ಹೌಸ್ | ಬೈಂದೂರು |
ಬೈಂದೂರು ಕುಗ್ರಾಮ ಎನಿಸಿಕೊಳ್ಳಬಾರದು, ಬಿಗ್‌ಗ್ರಾಮ ಎನಿಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ನಮ್ಮ ಕ್ಷೇತ್ರದ ಜನರಿಗೆ ಪ್ರಥಮ ಆದ್ಯತೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ತಮ್ಮ ಪರಮ ಗುರಿ ಎಂದು ಶಾಸಕ ಸುಕುಮಾರ ಶೆಟ್ಟಿ ಹೇಳಿದರು.
ಸೇತುವೆ ನಿರ್ಮಾಣಕ್ಕೆ ಸ್ಥಳ ವೀಕ್ಷಣೆ ನಡೆಸಿ ಮಾತನಾಡಿದ ಅವರು, ಕಬ್ಬಿನಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಚುನಾವಣೆಯ ಪೂರ್ವದಲ್ಲಿ ಇಲ್ಲಿಗೆ ಭೇಟಿ ನೀಡಿದಾಗ ಹಲವು ವರ್ಷಗಳಿಂದ ಈ ಊರಿನ ಜನರು ಅನುಭವಿಸುತ್ತಿದ್ದ ಸಂಕಷ್ಟ ಗಮನಕ್ಕೆ ಬಂತು. ಇಲ್ಲೊಂದು ಸೇತುವೆ ನಿರ್ಮಾಣ ಮಾಡಿದರೆ ಊರಿಗೊಂದು ಸಂಪರ್ಕ ಆಗುತ್ತದೆ. ಪ್ರತಿನಿತ್ಯ ಜನರು ಅನುಭವಿಸುವ ಬವಣೆ ದೂರವಾಗುತ್ತದೆ ಎಂಬ ದೃಷ್ಟಿಯಿಂದ ಸ್ಥಳೀಯರು ಸೇತುವೆಗಾಗಿ ಬೇಡಿಕೆ ಇಟ್ಟಿದ್ದರು. ಆ ನಿಟ್ಟಿನಲ್ಲಿ ಕಬ್ಬಿನಾಲೆ ಕಟ್ಟಿನಾಡಿಗೆ ಸಂಪರ್ಕಿಸುವ ಸೇತುವೆಗೆ ಅನುದಾನ ಮಂಜೂರು ಮಾಡಲಾಗಿದೆ ಎಂದರು.
ಸೇತು ನಿಮಾಣದಿಂದ ನೂರಾರು ಮನೆಯವರ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ ಸಂತೃಪ್ತಿ ನಮ್ಮದು. ನಮ್ಮ ಮನವಿಯನ್ನು ಪುರಸ್ಕರಿಸಿ ಅನುದಾನವನ್ನು ಒದಗಿಸಿದ ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಇದೇ ಸಂದರ್ಭದಲ್ಲಿ ಧನ್ಯವಾದ ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post