ಕಲ್ಪ ಮೀಡಿಯಾ ಹೌಸ್ | ಬೈಂದೂರು |
ಮಾಜಿ ಶಾಸಕ ರಾಜಕೀಯ, ಧಾರ್ಮಿಕ, ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಹಿರಿಯ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ (91) #Basrur Appanna Hegde ವಯೋಸಹಜ ಕಾಯಿಲೆಯಿಂದ ಶನಿವಾರ ನಿಧನರಾಗಿದ್ದಾರೆ.
1983-1985 ಅವಧಿಯಲ್ಲಿ ಜನತಾ ಪಕ್ಷದಿಂದ ಬೈಂದೂರು ಕ್ಷೇತ್ರದ ಶಾಸಕರಾಗಿದ್ದ ಅಪ್ಪಣ್ಣ ಹೆಗ್ಡೆ ಅವರು ರಾಜಕೀಯ ಜೀವನದಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾಗಿದ್ದು, ಜನಪ್ರತಿನಿಧಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದರು. ಶಾಸಕರಾಗಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು.
ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನದ ಮೂಲಕ ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಇವರು ನಿಧನಕ್ಕೆ ಗಣ್ಯರು ಸಾರ್ವಜನಿಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
