ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಸಿಎ) #CAA ಭಾರತೀಯ ಮುಸ್ಲೀಮರ ಮೇಲೆ ಪರಿಣಾಮ ಬೀರುತ್ತದೆ ಎಂದು ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಸುಪ್ರೀಂ ಕೋರ್ಟ್’ನಲ್ಲಿ #SupremeCourt ವಾದ ಮಂಡಿಸಿದ್ದಾರೆ.
ಪ್ರಕರಣ ಸಂಬಂಧ ನ್ಯಾಯಾಲಯದಲ್ಲಿ ವಾದ ಮಂಡಿಸಿರುವ ಅವರು, ಹಿಂದೂ #Hindu ನಿರಾಶ್ರಿತರಿಗೆ ಮತದಾನದ ಹಕ್ಕು ಸಿಗುವುದರಿಂದ ಸಿಎಎ ಭಾರತೀಯ ಮುಸ್ಲಿಮರ ಮೇಲೆ ಪರಿಣಾಮ ಬೀರುತ್ತದೆ ಎಂದಿದ್ದಾರೆ.
ಈ ನಡುವೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಗೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಇಂದಿರಾ ಜೈಸಿಂಗ್ ಅವರು ಸಿಎಎ ಅಡಿಯಲ್ಲಿ ಪಾಕಿಸ್ಥಾನದಿಂದ ಹಿಂದೂಗಳಿಗೆ ಪೌರತ್ವ ನೀಡುವುದನ್ನು ವಿರೋಧಿಸಿದ್ದು, ಅವರು ಮತದಾನದ ಹಕ್ಕನ್ನು ಪಡೆಯುತ್ತಾರೆ ಎಂದು ವಾದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post