ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ತಾಲೂಕಿನ ಹೊಳಲೂರಿನ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಕುರಿತು ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
10 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ರೈತರು, ಕಾರ್ಮಿಕರು, ನಿರುದ್ಯೋಗಿ ಯುವಕ ಮತ್ತು ಯುವತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 8ನೇ ತರಗತಿ ಉತ್ತೀರ್ಣರಾಗಿರಬೇಕು. ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಮಾರ್ಚ್ ತಿಂಗಳಿನಲ್ಲಿ ಪ್ರಾರಂಭವಾಗಲಿದ್ದು ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-577 216 (ಶಿವಮೊಗ್ಗ ತಾಲ್ಲೂಕು)
ಇವರಿಗೆ ಕೂಡಲೇ / ತಕ್ಷಣವೇ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9481955721, 9590601990
9743429595, 9449371579, 9538271653 ಅಥವಾ ದೂರವಾಣಿ ನಂ: 08182-245721ಗೆ ಸಂಪರ್ಕಿಸಬಹುದು.
Get in Touch With Us info@kalpa.news Whatsapp: 9481252093
Discussion about this post