ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆಕಸ್ಮಿಕವಾಗಿ ಬೆಂಕಿ ತಗುಲಿ ನಡು ರಸ್ತೆಯಲ್ಲೇ ಕಾರೊಂದು ಧಗಧಗನೆ ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಬಲಿಗೋಳ ಸಮೀಪದ ಹೆದ್ದಾರಿಯಲ್ಲಿ ನಡೆದಿದೆ.
ಶಿಕಾರಿಪುರದಿಂದ ಆಯನೂರು ಸಮೀಪದ ಹಣಗೆರೆ ಕಟ್ಟೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಸಂಪೂರ್ಣ ಕಾರನ್ನು ಆವರಿಸಿದೆ. ಸುಮಾರು 15 ನಿಮಿಷಗಳ ಕಾಲ ಕಾರು ಉರಿದಿರುವುದಾಗಿ ತಿಳಿದುಬಂದಿದೆ.
Also Read>> ಮೈಸೂರು-ಶಿವಮೊಗ್ಗ, ತಾಳಗುಪ್ಪದ 3 ರೈಲುಗಳು ಈ 2 ದಿನ ರದ್ದು | ಇಲ್ಲಿದೆ ಮಾಹಿತಿ
ಕಾರಿನಲ್ಲಿದ್ದವರು ಸಮಯಕ್ಕೆ ಸರಿಯಾಗಿ ಇಳಿದುಕೊಂಡು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.
ಈ ಘಟನೆ ಶಿಕಾರಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 











Comments 1