No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Thursday, March 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕಾವೇರಿ ಹೋರಾಟ: ಬೆಂಗಳೂರು ಬಂದ್ ಶಾಂತಿಯುತ ಯಶಸ್ವಿ

ಸರ್ಕಾರಕ್ಕೆ ಮೂರು ದಿನಗಳ ಗಡುವು | ಅವೈಜ್ಞಾನಿಕ ಆದೇಶದ ವಿರುದ್ಧ ಆಕ್ರೋಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 27, 2023
in ರಾಷ್ಟ್ರೀಯ
0
ಕಾವೇರಿ ಹೋರಾಟ: ಬೆಂಗಳೂರು ಬಂದ್ ಶಾಂತಿಯುತ ಯಶಸ್ವಿ

Image Courtesy: Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕಾವೇರಿ #Cauvery ನೀರು ವಿವಾದ ಸಂಬಂಧ ಇಂದು ಕರೆ ನೀಡಿದ ಬೆಂಗಳೂರು ಬಂದ್ #Bandh ಶಾಂತಿಯುತವಾಗಿ ಸಂಪೂರ್ಣ ಯಶಸ್ವಿಯಾಗಿದ್ದು, ಜನರು ಸ್ವಯಂಪ್ರೇರಿತರಾಗಿ ಬೆಂಬಲ ನೀಡಿದ್ದರು.

ಕಾವೇರಿ ನೀರು ನಿರ್ವಹಣಾ ಸಮಿತಿ #CauveryWaterManagementCommittee ಅವೈಜ್ಞಾನಿಕ ಆದೇಶದ ವಿರುದ್ಧ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ರೈತ ಸಂಘ ಸಂಘಟನೆಗಳ ಒಕ್ಕೂಟ ಮತ್ತು ವಿವಿಧ ಕನ್ನಡ ಪರ ಸಂಘಟನೆಗಳ ಹೋರಾಟಗಾರರು ಕರೆ ನೀಡಿದ ಬೆಂಗಳೂರು ಬಂದ್ ಯಶಸ್ವಿಯಾಗಿದೆ.
ವಿವಿಧ ಸಂಘಟನೆಗಳು ಕರೆ ನೀಡಿದ ಬೆಂಗಳೂರು ಬಂದ್’ಗೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನ ಎಲ್ಲಾ ಶಾಲೆಗಳಿಗೆ ಕಾಲೇಜುಗಳಿಗೆ ರಜೆ ಘೋಷಿಸಿತು. ಇದರ ಜೊತೆಗೆ ನೆನ್ನೆ ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿತ್ತು.

ಬೆಂಗಳೂರು ನಗರದ ಟೌನ್ ಹಾಲ್ #Townhall ಬಳಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ರೈತರತ್ನ ಕುರುಬೂರು ಶಾಂತಕುಮಾರ್ ಮತ್ತು ಅವರ ಬೆಂಬಲಿಗ ಬೆಂಬಲಿಗರು ಮೆರವಣಿಗೆಯಲ್ಲಿ ಪುರಭವನದ ಕಡೆ ಹೊರಟಿದ್ದಾಗ ಪೊಲೀಸರು ವಶಕ್ಕೆ ಪಡೆದು ಬಂಧಿತರನ್ನು ಫ್ರೀಡಂ ಪಾರ್ಕ್’ಗೆ ಕರೆ ತಂದರು.

ಫ್ರೀಡಂ ಪಾರ್ಕ್’ನಲ್ಲೇ ಪ್ರತಿಭಟನೆಯನ್ನು ತೀವ್ರಗೊಳಿಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ನಂತರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಶಾಂತಕುಮಾರ್, ನಾವು ಶಾಂತಿಯುತವಾಗಿ ಪ್ರತಿಭಟನೆಯನ್ನು ಮಾಡುತ್ತಿದ್ದರೂ ಸರ್ಕಾರ ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಪ್ರತಿಭಟನಾಕಾರರ ಮೇಲೆ ದೌರ್ಜನ್ಯ ಎಸೆಗಿದೆ ಎಂದು ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದರು.

ನಾವು ಬೆಂಗಳೂರು ನಗರದ ಟೌನ್ ಹಾಲ್ ಮುಂಭಾಗದಲ್ಲಿ ಪ್ರತಿಭಟನೆಯನ್ನು ಮಾಡುವುದಾಗಿ ಈ ಮುಂಚೆಯೇ ಸಭೆಯಲ್ಲಿ ಘೋಷಣೆ ಮಾಡಲಾಗಿದೆ. ಜೊತೆಗೆ ಪ್ರತಿಭಟನೆಯನ್ನು ಮಾಡಲು ಪೊಲೀಸರಿಂದ ಅನುಮತಿಯನ್ನು ಪಡೆಯಲಾಗಿದೆ. ಆದರೂ ಕೂಡಾ ಏಕಾಏಕಿ ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆಯನ್ನು ಜಾರಿ ಮಾಡಿ ಪ್ರತಿಭಟನೆ ಮಾಡದಂತೆ ತಡೆಯೊಡ್ಡಿದೆ ಎಂದರು.

ಕಾವೇರಿ ಎಂಬುದು ನಮ್ಮ ತಾಯಿ ಇದ್ದಂತೆ ಎಂದು ನಮ್ಮ ಕರ್ನಾಟಕದ ಜನ ಪರಿಗಣಿಸಿದ್ದಾರೆ. ಇಂದಿನ ಬಂದ್ ರಾಜಕೀಯ ಪ್ರೇರಿತ ಬಂದ್ ಅಲ್ಲ, ಜನಸಾಮಾನ್ಯರ ಬಂದ್ ಆಗಿದೆ. ಆದರೆ ಸರ್ಕಾರ ವಾಮಮಾರ್ಗದ ಮೂಲಕ ಪೋಲೀಸರಿಂದ ನಮ್ಮನ್ನು ಬಂಧಿಸಿ, ಚಳುವಳಿಯನ್ನು ಹತ್ತಿಕ್ಕಲು ಪ್ರಯತ್ನ ಪಟ್ಟಿದ್ದಾರೆ. ಅದರೆ ನಾವು ಇದ್ಯಾವುದಕ್ಕೂ ಜಗ್ಗುವುದಿಲ್ಲ ಎಂದರು.
ಡಿ.ಕೆ. ಶಿವಕುಮಾರ್ ಅವರು ಮೇಕೆದಾಟು ಅಣೆಕಟ್ಟು ಹೋರಾಟದಲ್ಲಿ ಭಾಗವಹಿಸಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತತಕ್ಷಣವೇ ಮೇಕೆದಾಟು ಯೋಜನೆಗೆ ಮುಂದಾಗುವುದಾಗಿ ತಿಳಿಸಿದರು. ಈಗ ಅವರದೇ ಸರ್ಕಾರ ಅಧಿಕಾರಕ್ಕೆ ಬಂದಿದೆ. ಜೊತೆಗೆ ಡಿಕೆಶಿ ಅವರೆ ಜಲ ಸಂಪನ್ಮೂಲ ಸಚಿವರಾಗಿದ್ದಾರೆ. ಆದರೂ ಕೂಡಾ ಮೇಕೆದಾಟು ಯೋಜನೆಗೆ ಬಜೆಟ್ ನಲ್ಲಿ ಹಣ ಮೀಸಲಿಟ್ಟಿಲ್ಲ ಎಂದು ವ್ಯಂಗ್ಯವಾಡಿದರು.

ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಮಾತನಾಡಿ, ನಾವೇನೂ ನಮ್ಮ ಸ್ವಾರ್ಥಕ್ಕಾಗಿ ಪ್ರತಿಭಟನೆಯನ್ನು ಮಾಡಲು ಬಂದಿಲ್ಲ. ರಾಜ್ಯದ ಜನತೆ ಮತ್ತು ದೇಶದ ಅನ್ನದಾತರ ಪರವಾಗಿ ಹೋರಾಟ ಮಾಡಲು ಬಂದಿದ್ದೇವೆ ಎಂದರು. ಹೋರಾಟಗಾರರ ಕಿಚ್ಚನ್ನು ಅರಿತ ಸರ್ಕಾರ ಹೋರಾಟವನ್ನು ಹತ್ತಿಕ್ಕುವ ಸಲುವಾಗಿ ಹೋರಾಟಗಾರರನ್ನು ಕಾನೂನಿನ ನೆಪವೊಡ್ಡಿ ಬಂಧಿಸಿರುವುದು ಅಕ್ಷ್ಯಾಮ ಅಪರಾಧ ಎಂದರು.

ನಾನು ಒಂದು ರಾಜಕೀಯ ಪಕ್ಷದ ಅಧ್ಯಕ್ಷನಾಗಿ ಇಲ್ಲಿಗೆ ಬಂದಿಲ್ಲ, ಒಬ್ಬ ಸಾಮಾನ್ಯ ಪ್ರಜೆಯಾಗಿ ಈ ರಾಜ್ಯದ ಜನರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡಲು ಬಂದಿದ್ದೇನೆ ಎಂದರು.
ಕಾವೇರಿ ನೀರನ್ನು ತಮಿಳುನಾಡಿಗೆ ಹರಿಯಲು ಸಾಧ್ಯವಿಲ್ಲ ಎಂದು ಹೇಳಿ ಕೋರ್ಟ್ ಹೆಚ್ಚೆಂದರೆ ಛೀಮಾರಿ ಹಾಕಬಹುದು, ಇಲ್ಲವೇ ಜೈಲು ಶಿಕ್ಷೆ ವಿಧಿಸಬಹುದು. ಆಗ ಇಡೀ ಮಂಡಲವೇ ಬೇಕಿದ್ದರೆ ರಾಜ್ಯದ ಜನರ ಹಿತರಕ್ಷಣೆಗಾಗಿ ಸಾಮೂಹಿಕ ರಾಜೀನಾಮೆ ನೀಡಿ ಜೈಲು ಶಿಕ್ಷೆಯನ್ನು ಅನುಭವಿಸಿ. ಇಲ್ಲವೇ ಇಡೀ ಕರ್ನಾಟಕದ ಜನತೆಯೇ ನಿಮ್ಮೊಂದಿಗೆ ಜೈಲಿಗೆ ಬರಲಿ ಸಿದ್ದವಿದೆ ಎಂದು ಮುಖ್ಯಮಂತ್ರಿ ಚಂದ್ರು ತಿಳಿಸಿದರು.

ಮಂಡ್ಯ ರೈತ ಹಿತರಕ್ಷಣಾ ಸಮಿತಿಯ ಸುನಂದಾ ಜಯರಾಂ ಮಾತನಾಡಿ, ಪ್ರಾಧಿಕಾರದ ತೀರ್ಪಿಗೆ ಅನುಗುಣವಾಗಿ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಿದೆ. ಈ ಮುಂಚೆ ತಮಿಳುನಾಡಿಗೆ ನೀರು ಹರಿಸಬೇಕಾದ ಸಂದರ್ಭದಲ್ಲಿ ಸರ್ಕಾರದ ಸರ್ವ ಪಕ್ಷಗಳ ಸಭೆ ಕರೆದು ತೀರ್ಮಾನ ಕೈಗೊಳ್ಳುತ್ತಿತ್ತು. ಆದರೆ, ಜಲ ಸಂಪನ್ಮೂಲ ಸಚಿವ ಡಿಕೆಶಿ ರವರು ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರ ಜೊತೆಗೆ ವ್ಯವಹಾರಿಕ ಮೈತ್ರಿಗಾಗಿ ರಾಜ್ಯದ ಜನರ ಹಿತವನ್ನು ಕಾಪಾಡಲು ವಿಫಲರಾಗಿ ಏಕಾಏಕಿ ನೀರನ್ನು ಹರಿಸಿ ರಾಜ್ಯದ ಜನರ ಮರಣ ಶಾಸನ ಬರೆಯಲು ಹೊರಟಿದೆ ಎಂದರು.

http://kalpa.news/wp-content/uploads/2023/05/VID-20230516-WA0005.mp4

 

ನಂತರ ಮುಖ್ಯಮಂತ್ರಿಗಳ ಪರವಾಗಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ರವರು ಪ್ರತಿಭಟನೆಯ ಸ್ಥಳಕ್ಕೆ ಆಗಮಿಸಿ ಪ್ರತಿಭಟನಕಾರರಿಂದ ಮನವಿಯನ್ನು ಸ್ವೀಕರಿಸಿ, ಮುಖ್ಯಮಂತ್ರಿಗಳು ತಮ್ಮ ಅಧಿಕೃತ ಕಾರ್ಯದ ಮೇಲೆ ಮೈಸೂರಿಗೆ ಹೋಗಿದ್ದಾರೆ. ಅವರು ಬಂದ ನಂತರ ನಿಮ್ಮ ಮನವಿಯನ್ನು ಅವರಿಗೆ ತಿಳಿಸಿ, ನೀವು ವಿಧಿಸಿರುವ ಮೂರು ದಿನಗಳ ಗಡುವಿನ ಒಳಗಾಗಿ ವಿವಿಧ ಸಂಘಟನೆಗಳ ಮುಖ್ಯಸ್ಥರುಗಳ ಸಭೆಯನ್ನು ಕರೆಯಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಜೊತೆಗೆ ಮುಖ್ಯಮಂತ್ರಿ ಜೊತೆಗೆ ಮಾತನಾಡಿ ಇಂದು ಬಂಧಿತರಾಗಿರುವವರನ್ನು ಬಿಡುಗಡೆ ಮಾಡಿಸುವುದಾಗಿ ತಿಳಿಸಿದರು.

ಇಂದಿನ ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಹಲವು ಕರ್ನಾಟಕ ರಾಜ್ಯ ರೈತ ಸಂಘ, ರಾಜ್ಯ ಕಬ್ಬು ಬೆಳೆಗಾರರ ಸಂಘ, ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಮಂಡ್ಯ ರೈತ ಹಿತರಕ್ಷಣ ಸಮಿತಿ ಅಮ್ ಆದ್ಮಿ ಪಕ್ಷ, ಸಣ್ಣ ಕೈಗಾರಿಕೆಗಳ ಒಕ್ಕೂಟ, ಎಫ್’ಕೆಸಿಸಿಐ, ಎಪಿಎಂಸಿ ವರ್ತಕರ ಸಂಘ, ಕೆಆರ್ ಮಾರ್ಕೆಟ್ ವ್ಯಾಪಾರಸ್ಥರ ಸಂಘ ತರಕಾರಿ ಹೂವು ಮಾರಾಟ ಮಾರುಕಟ್ಟೆ ಸಂಘ, ಜಯ ಕರ್ನಾಟಕ, ಜಯ ಕರ್ನಾಟಕ ಜನಪರ ವೇದಿಕೆ, ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ, ಸಮತ ಸೈನಿಕ ದಳ, ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ, ನಾರಾಯಣಸ್ವಾಮಿ ನೇತೃತ್ವದ ಕರ್ನಾಟಕ ವಾಹನ ಚಾಲಕರ ಮಾಲೀಕರ ಸಂಘ, ಕರ್ನಾಟಕ ಹಿತರಕ್ಷಣಾ ಸೇನೆ, ಆಟೋ ಚಾಲಕರು ಮತ್ತು ಮಾಲೀಕರ ಸಂಘ, ಟ್ಯಾಕ್ಸಿ ಮಾಲೀಕರು ಮತ್ತು ಚಾಲಕರು ಸೇರಿದಂತೆ ಇನ್ನೂರಕ್ಕೂ ಹೆಚ್ಚು ಸಂಘ ಸಂಸ್ಥೆಗಳ ಮುಖಂಡರುಗಳು, ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿ ಬಂದ್ ಯಶಸ್ವಿಗೆ ಕಾರಣಕರ್ತರಾದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bengaluru BandhCauvery Water Management CommitteeKannada News WebsiteLatest News Kannadaಕರ್ನಾಟಕ ಜಲ ಸಂರಕ್ಷಣಾ ಸಮಿತಿಕಾವೇರಿಕಾವೇರಿ ನೀರು ನಿರ್ವಹಣಾ ಸಮಿತಿಕಾವೇರಿ ಹೋರಾಟಬೆಂಗಳೂರುಬೆಂಗಳೂರು ಬಂದ್
Share199Tweet123Send
Previous Post

ಮೈಸೂರಿನಲ್ಲೊಂದು ಇಂಡಿಯನ್ ಸ್ವಚ್ಛತಾ ಲೀಗ್ ಸೀಸನ್-2: ಏನಿದು? ಇದರ ವಿಶೇಷತೆಯೇನು?

Next Post

ಭದ್ರಾವತಿ ವಿಐಎಸ್’ಎಲ್ ಆವರಣದಲ್ಲಿ ಬೋನಿಗೆ ಬಿದ್ದ ಚಿರತೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ ವಿಐಎಸ್’ಎಲ್ ಆವರಣದಲ್ಲಿ ಬೋನಿಗೆ ಬಿದ್ದ ಚಿರತೆ

ಭದ್ರಾವತಿ ವಿಐಎಸ್'ಎಲ್ ಆವರಣದಲ್ಲಿ ಬೋನಿಗೆ ಬಿದ್ದ ಚಿರತೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

March 19, 2026
National Safety Week 2026 Observed at Carriage Repair Workshop, Hubballi

National Safety Week 2026 Observed at Carriage Repair Workshop, Hubballi

March 18, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಹುಬ್ಬಳ್ಳಿ | ರೈಲ್ವೆ ಇಲಾಖೆ ಪರೀಕ್ಷೆ ಮುಂದೂಡಿಕೆ

March 18, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯುಗಾದಿ ಹಬ್ಬ ಹಿನ್ನೆಲೆ: ಯಶವಂತಪುರ ಮತ್ತು ಹೊಸಪೇಟೆ ನಡುವೆ ವಿಶೇಷ ರೈಲು ಸೇವೆ

March 18, 2026
ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

March 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL