ನವದೆಹಲಿ: ನಮ್ಮ ದೇಶದ ಪ್ರಮುಖ ತನಿಖಾ ಸಂಸ್ಥೆಗಳಾದ ಸಿಬಿಐ, ಇಡಿ ಸೇರಿದಂತೆ ಹಲವು ಇಲಾಖೆಗಳನ್ನು ಕೇಂದ್ರದ ಬಿಜೆಪಿ ಸರ್ಕಾರ ವೈಯಕ್ತಿಕ ಸೇಡು ತೀರಿಸಿಕೊಳ್ಳಲು ಬಳಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಐಎನ್‌ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಪಿ ಚಿದಂಬರಂ ಅವರ ಸಿಬಿಐ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಮಾತನಾಡಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸರ್ಜೆವಾಲಾ, ಬಿಜೆಪಿ ಸರ್ಕಾರ ಪ್ರಮುಖ ತನಿಖಾ ಸಂಸ್ಥೆಗಳನ್ನು ತನ್ನ ಸ್ವಾರ್ಥಕ್ಕಾಗಿ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಟೀಕಿಸಿದ್ದಾರೆ.
Discussion about this post