ಅಹ್ಮದಾಬಾದ್: ಗುಜರಾತ್‌ನ ಇಶ್ರತ್ ಜಹಾನ್ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಅಂದಿನ ಗೃಹ ಸಚಿವ ಅಮಿತ್ ಶಾ ಅವರನ್ನು ಸಿಬಿಐ ಬಂಧಿಸಬೇಕು ಎಂದು ಗುಜರಾತ್‌ನ ಮಾಜಿ ಡಿಜಿಪಿ ವಂಜರಾ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಇಂದು ಪ್ರಧಾನಿಯಾಗಿರುವ ಮೋದಿ ಅವರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದು ಇದೇ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗಿತ್ತು. ಅಂದಿನಿಂದ ಮೋದಿ ಹಾಗೂ ಅಮಿತ್ ಶಾ ಜಾಮೀನು ಪಡೆದುಕೊಂಡಿದ್ದು.
2014ರಲ್ಲಿ ಈ ಪ್ರಕರಣದ ವಿಚಾರಣೆ ನಡೆಸಿದ್ದ ಸಿಬಿಐ, ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಮೋದಿ ಹಾಗೂ ಅಮಿತ್ ಶಾ ಅವರಿಗೆ ಕ್ಲೀನ್ ಚಿಟ್ ನೀಡಿತ್ತು. ಮುಕ್ತಾಯವಾಗಿರುವ ಈ ಪ್ರಕರಣವನ್ನು ಮತ್ತೆ ಕೆದಕುತ್ತಿರುವುದರ ಹಿಂದೆ ರಾಜಕೀಯ ದುರುದ್ದೇಶವಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
Discussion about this post