ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಶಿಕಾರಿಪುರದ ಕುಮದ್ವತಿ ರೆಸಿಡೆನ್ಶಿಯಲ್ ಸೆಂಟ್ರಲ್ ಸ್ಕೂಲ್ (ಕೆಆರ್‌ಸಿಎಸ್), 2025–26ನೇ ಶೈಕ್ಷಣಿಕ ಸಾಲಿನ ಸಿಬಿಎಸ್‌ಇ 10ನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಸಾಧಿಸಿದೆ.
Also Read>> ತೀರ್ಥಹಳ್ಳಿ, ಮದುವೆ ಮುಗಿಸಿ ಮನೆಗೆ ಬಂದ ಕುಟುಂಬಸ್ಥರಿಗೆ ಕಾದಿತ್ತು ಶಾಕ್!
ವಿದ್ಯಾರ್ಥಿಗಳು ಮತ್ತು ಶಿಕ್ಷಕರ ನಿರಂತರ ಸಮರ್ಪಣೆ, ಕಠಿಣ ಪರಿಶ್ರಮ ಹಾಗೂ ಶೈಕ್ಷಣಿಕ ಉತ್ಕೃಷ್ಟತೆಗೆ ಈ ಶ್ಲಾಘನೀಯ ಸಾಧನೆ ಸಾಕ್ಷಿಯಾಗಿದೆ.
ಶ್ರೇಯಾ ಎನ್. ಎಸ್. ಅವರು 94.8% ಅಂಕಗಳೊಂದಿಗೆ ಶಾಲೆಯ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಒಟ್ಟು 67 ವಿದ್ಯಾರ್ಥಿಗಳಲ್ಲಿ 23 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 25 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು 19 ವಿದ್ಯಾರ್ಥಿಗಳು ದ್ವೀತಿಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಶಿಕ್ಷಕ ವೃಂದದ ಬದ್ಧತೆಯ ಪ್ರಯತ್ನಗಳನ್ನು ಶ್ಲಾಘಿಸಿದೆ. ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಹಾಗೂ ವೃತ್ತಿಜೀವನದ ಪ್ರಯತ್ನಗಳಿಗೆ ಆಡಳಿತ ಮಂಡಳಿ ಮೆಚ್ಚಿಗೆ ವ್ಯಕ್ತಪಡಿಸಿದೆ.
ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿಯವರು, ಪ್ರಾಚಾರ್ಯರು, ಶಿಕ್ಷಕರು, ಪೋಷಕರು ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















