ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದಲ್ಲಿ 72ನೆಯ ಗಣರಾಜ್ಯೋತ್ಸವ ಆಚರಿಸಲಾಯಿತು.
ಸರ್ಕಾರಿ ಕನ್ನಡ ಮಾಧ್ಯಮ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ, ಸರ್ಕಾರಿ ಪ್ರೌಡ ಶಾಲೆ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಪ್ರಾಥಮಿಕ ಆರೋಗ್ಯ ಕೇಂದ್ರ, ನಾಡ ಕಚೇರಿ, ಗ್ರಾಮ ಪಂಚಾಯತಿ ಕಾರ್ಯಲಯ, ರೈತ ಸಂಪರ್ಕ ಕೇಂದ್ರ ಸೇರಿದಂತೆ ಅನೇಕ ಕಡೆಗಳಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯ್ತಿ ಆಡಳಿತ ಅಧಿಕಾರಿ ಹಾಗೂ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಶ್ರೀಶೈಲ ಭೋವಿ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಮರೇಶಪ್ಪ, ಸುರೇಶ್, ಪರಮಣ್ಣ, ಸೂಗಪ್ಪ, ನಾಗಲಿಂಗಪ್ಪ ಸೇರಿದಂತೆ ಅನೇಕರಿದ್ದರು.
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಇದ್ದರು. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಎಸ್’ಡಿಎಂಸಿ ಅಧ್ಯಕ್ಷ ಅಯ್ಯಪ್ಪ ಕುರುಬರ, ಉಪಾಧ್ಯಕ್ಷೆ ಶಾರದಾ ಅಮರೇಶ್, ಸದಸ್ಯರಾದ ಹೂವಪ್ಪ, ಶಿವರಾಜ್, ದುರುಗಪ್ಪ, ಮುಖ್ಯ ಶಿಕ್ಷಕರಾದ ಗಣೇಶ್, ಶಿಕ್ಷಕರಾದ ಮಾಲತೇಶ್, ಶಶಿಕಲಾ, ಪರಿನಾಬಿ ಸೇರಿದಂತೆ ಅನೇಕರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post